ಪ್ರಚೋದನಕಾರಿ ಹೇಳಿಕೆ ಪ್ರಕರಣ: ಬಿಜೆಪಿ ಶಾಸಕ ಸಂಗೀತ್ ಸೋಮ್ ಗೆ ಕ್ಲೀನ್ ಚೀಟ್
ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್ ಗೆ ವಿಶೇಷ ತನಿಖಾ ತಂಡ(ಎಸ್ಐಟಿ) ಪ್ರಕರಣದಿಂದ ಕ್ಲೀನ್...

Published On :
ಲಖನೌ: ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್ ಗೆ ವಿಶೇಷ ತನಿಖಾ ತಂಡ(ಎಸ್ಐಟಿ) ಪ್ರಕರಣದಿಂದ ಕ್ಲೀನ್ ಚೀಟ್ ನೀಡಿದೆ.
ಪ್ರಚೋದನಕಾರಿ ಹೇಳಿಕೆ ವಿಡಿಯೋವನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ದ ಆರೋಪದ ಮೇಲೆ ಸಂಗೀತ್ ಸೋಮ್ ವಿರುದ್ಧ ಉತ್ತರ ಪ್ರದೇಶದ 2013ರ ಸೆಪ್ಟೆಂಬರ್ 2ರಂದು ಪ್ರಕರಣ ದಾಖಲಿಸಿಕೊಂಡಿದ್ದರು.
ನ್ಯಾಯಾಲಯಕ್ಕೆ ತನಿಖೆಯ ಅಂತಿಮ ವರದಿಯನ್ನು ನೀಡಿರುವ ಎಸ್ಐಟಿ ಅಧಿಕಾರಿಗಳು ಪ್ರಕರಣ ಸಂಬಂಧ ಸಂಗೀತ್ ಸೋಮ್ ವಿರುದ್ಧ ಯಾವುದೇ ಸಾಕ್ಷ್ಯ ಪುರಾವೆಗಳು ಲಭಿಸಿಲ್ಲ. ಇನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ಸಹ ವಿಡಿಯೋವನ್ನು ಅಪ್ ಲೋಡ್ ಮಾಡಿರುವ ಹಾಗೂ ಅದನ್ನು ಲೈಕ್ ಮಾಡಿರುವವರ ವಿವರವನ್ನು ನೀಡುವಲ್ಲಿ ವಿಫಲವಾಗಿದೆ ಎಂದು ವರದಿಯಲ್ಲಿ ನಮೂದಿಸಿದ್ದಾರೆ.
2013ರ ಮುಜಾಫ್ ನಗರದ ಕೋಮುಗಲಭೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಸಂಗೀತ್ ಸೋಮ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿವಿಶೇಷ ತನಿಖಾ ತಂಡಪ್ರಚೋದನಾಕಾರಿ ಹೇಳಿಕೆSangeet Somಸಂಗೀತ್ ಸೋಮ್Special Investigative Teaminflammatory video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


