ದೇಶ

ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ 'ಅಪಾಯಕಾರಿ ಆಟ' ಆಡುತ್ತಿದೆ; ಪರಿಕ್ಕರ್

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ 'ಅಪಾಯಕಾರಿ ಆಟ' ಆಟ ಆಡುತ್ತಿದೆ ಎಂದು ರಕ್ಷಣಾ ಖಾತೆ ಮಾಜಿ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ...

ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ 'ಅಪಾಯಕಾರಿ ಆಟ' ಆಡುತ್ತಿದೆ; ಪರಿಕ್ಕರ್
ರಕ್ಷಣಾ ಖಾತೆ ಮಾಜಿ ಸಚಿವ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್
Published On :
ಪಣಜಿ: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ 'ಅಪಾಯಕಾರಿ ಆಟ' ಆಟ ಆಡುತ್ತಿದೆ ಎಂದು ರಕ್ಷಣಾ ಖಾತೆ ಮಾಜಿ ಸಚಿವ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಶನಿವಾರ ಹೇಳಿದ್ದಾರೆ. 
ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ ಕುಲ್'ಭೂಷಣ್ ಜಾಧವ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಜಾಧವ್ ಪ್ರಕರಣ ಸಂಬಂಧ ಪಾಕಿಸ್ತಾನ "ಅಪಾಯಕಾರಿ ಆಟ'ವನ್ನು ಆಡುತ್ತಿದೆ. ಒಂದೊಮ್ಮೆ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದರೆ, ಆ ದೇಶಕ್ಕೆ ಹೋರಾಟ ಮಾಡುವ ಶಕ್ತಿಯೇ ಇರುವುದಿಲ್ಲ ಎಂಬುದನ್ನು ಪಾಕಿಸ್ತಾನ ಅರ್ಥಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಆದರೆ, ನಾವು ಶಾಂತಿಯನ್ನು ಬಯಸುತ್ತೇವೆ. ನಾವು ಪ್ರಚೋದನೆ ಮಾಡುವುದಿಲ್ಲ. ಆಧ್ದರಿಂದ ಪಾಕಿಸ್ತಾನ ಸರ್ಕಾರ ಕುಲಭೂಷಣ್ ಜಾಧವ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿಸಬೇಕೆಂದು ಪರಿಕ್ಕರ್ ಅವರು ಒತ್ತಾಯಿಸಿದ್ದಾರೆ. 
ಮುಖ್ಯವಾಗಿ ಹೇಳಬೇಕೆಂದರೆ, ಜಾಧವ್ ಅವರನ್ನು ಅಪಹರಣ ಮಾಡಲಾಗಿತ್ತು. ಜಾಧವ್ ಪಾಕಿಸ್ತಾನದವರಲ್ಲ. ಇರಾನ್'ನಲ್ಲಿದ್ದರು. ತಾಲಿಬಾನ್ ಗಳು ಜಾಧವ್ ಅವರನ್ನು ಅಪಹರಿಸಿ ಪಾಕಿಸ್ತಾನಕ್ಕೆ ಕರೆದೊಯ್ದಿದ್ದರು ಎಂದು ಇರಾನ್ ಹೇಳಿತ್ತು. ಇಂತಹ ಕೆಲಸಗಳನ್ನು ಮಾಡುವುದು ಪಾಕಿಸ್ತಾನಕ್ಕೆ ಚಾಳಿಯಾಗಿ ಹೋಗಿದೆ ಎಂದು ಕಿಡಿಕಾರಿದ್ದಾರೆ. 
ಜಾಧವ್ ವಿಷಯ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸರಿಯಾದ ರೀತಿಯಲ್ಲಿಯೇ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಜಾಧವ್'ಗೆ ಗಲ್ಲು ಶಿಕ್ಷೆ ನೀಡಿದ್ದೇ ಆದರೆ, ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಪಾಕಿಸ್ತಾನ ತನ್ನ ದುರ್ನಡತೆಯನ್ನು ಮುಂದುವರೆಸಿದ್ದೇ ಆದರೆ, ನಮ್ಮ ದೇಶ ಅಗತ್ಯ ಕೆಲಸಗಳನ್ನು ಮಾಡುತ್ತದೆ. ಪಾಕಿಸ್ತಾನವನ್ನು ನಾವು ನೋಡಿಕೊಳ್ಳುತ್ತೇವೆಂದು ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.