ಶ್ರೀನಗರ ಲೋಕಸಭಾ ಕ್ಷೇತ್ರ ಉಪ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಶನಿವಾರ ಆರಂಭವಾಗಿದೆ...

Published On :
ಕಾಶ್ಮೀರದ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಶನಿವಾರ ಆರಂಭವಾಗಿದೆ.
ಏಪ್ರಿಲ್ 9 ರಂದು ಶ್ರೀನಗರ ಸಂಸತ್ ಕ್ಷೇತ್ರದಲ್ಲಿ 38 ಮತಗಟ್ಟೆಗಳನ್ನು ತೆರೆದು ಉಪ ಚುನಾವಣಾ ಪ್ರಕ್ರಿಯೆನ್ನು ಆರಂಭಿಸಲಾಗಿದತ್ತು. ಆದರೆ, ವೇಳೆ ಬುದ್ಗಾಮ್ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿನ ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಈ ವೇಳೆ ನಡೆದ ಹಿಂಸಾಚಾರಕ್ಕೆ 8 ಮಂದಿ ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಹೆದರಿದ್ದ ಜನತೆ ಮತ ಹಾಕಲು ಧೈರ್ಯ ಮಾಡಿರಲಿಲ್ಲ. ಇದರ ಪರಿಣಾಮ ಅಂದಿನ ಚುನಾವಣೆ ಶೇ.2 ರಷ್ಟು ಮತದಾರರು ಮಾತ್ರ ಮತ ಚಲಾಯಿಸಿದ್ದರು. ಇದು ಆ ರಾಜ್ಯದ ಇತಿಹಾಸದಲ್ಲಿಯೇ ತೀರಾ ಕಳಪೆ ಸಾಧ್ಯನೆಯಾಗಿತ್ತು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿತ್ತು.
ಇದಾದ ಬಳಿಕ ಮರುದಾನ ನಡೆಸುವಾಗಿ ಘೋಷಣೆ ಮಾಡಿದ್ದ ಚುನಾವಣಾ ಆಯೋಗ, ಏಪ್ರಿಲ್ 13 ರಂದು ಮರುದಾನ ಪ್ರಕ್ರಿಯೆಯನ್ನು ಆರಂಭಿಸಿತ್ತು. ಅಂದು ಕೂಡ ಶೇ.7.13ರಷ್ಟು ಮತದಾರರು ಮಾತ್ರ ಮತ ಹಾಕಿದ್ದರು.
ಲೋಕಸಭಾ ಕ್ಷೇತ್ರ ಉಪ ಚುನಾವಣೆಯ ಕಣದಲ್ಲಿ ಫರೂಕ್ ಅಬ್ದುಲ್ಲಾ ಮತ್ತು ಆಡಳಿತಾರೂಢ ಪಕ್ಷದ ನಜೀರ್ ಅಹ್ಮದ್ ಖಾನ್ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ನಿಂತಿದ್ದು, 9 ಅಭ್ಯರ್ಥಿಗಳ ಭವಿಷ್ಯ ಇಂದು ಬಹಿರಂಗಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirCountingಮತಎಣಿಕೆLok Sabha constituencyಲೋಕಸಭಾ ಕ್ಷೇತ್ರಉಪ ಚುನಾವಣೆbypoll
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


