ಹೈಜಾಕ್ ಬೆದರಿಕೆ: ಮುಂಬೈ, ಚೆನ್ನೈ, ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ
ವಿಮಾನ ಹೈಜಾಕ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಚೆನ್ನೈ: ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ನಿಂದ ಹೊರಡುವ ವಿಮಾನಗಳಲ್ಲಿ ಯಾವುದಾದರೊಂದನ್ನು ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರು ಕೊನೆ ಕ್ಷಣದಲ್ಲಿ ನಿಲ್ದಾಣದೊಳಗೆ ಪ್ರವೇಶಿಸದಂತೆ ಮತ್ತು ತಪಾಸಣೆಗೆ ಸಂಪೂರ್ಣ ಸಹಕರಿಸುವಂತೆ ಅಧಿಕಾರಿಗಳು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.
ಚೆನ್ನೈನ ಅರಿಗ್ನಾರ್ ಅಣ್ಮಾ ವಿಮಾನ ನಿಲ್ದಾಣದ ಭದ್ರತಾ ಮಟ್ಟವನ್ನು ಏಳುಪಟ್ಟು ಜಾಸ್ತಿ ಮಾಡಲಾಗಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಜವಾನರು ವಿಮಾನ ನಿಲ್ದಾಣದ ಆವರಣದಲ್ಲಿ ಗುಂಡು ತುಂಬಿದ ಕೋವಿಗಳು, ಶಸ್ತ್ರಾಸ್ತ್ರಗಳ ಸಹಿತ ಗಸ್ತು ತಿರುಗುತ್ತಿದ್ದಾರೆ. ಭಯೋತ್ಪಾದಕ ಸಂಘಟನೆ ವಿಮಾನವನ್ನು ಹೈಜಾಕ್ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಚೆನ್ನೈಯ ಕಾಮರಾಜ್ ದೇಶಿ ಟರ್ಮಿನಲ್ ಮತ್ತು ಅಂತಾರಾಷ್ಟ್ರೀಯ ಟರ್ಮಿನಲ್ ಗಳ ಬಳಿ ಪ್ರಯಾಣಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಪ್ರಯಾಣಿಕರ ಲಗ್ಗೇಜುಗಳನ್ನು ಮತ್ತು ಹ್ಯಾಂಡ್ ಬ್ಯಾಗ್ ಗಳನ್ನು ಸೂಕ್ಷ್ಮವಾಗಿ ತಪಾಸಣೆ ನಡೆಸುವಂತೆ ಆದೇಶಿಸಲಾಗಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಿನ್ನೆ ವಿಮಾನ ಭದ್ರತಾ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು.
ಮುಂಬೈ, ಹೈದರಾಬಾದ್ ಮತ್ತು ಚೆನ್ನೈ ವಿಮಾನ ನಿಲ್ದಾಣಗಳಿಂದ ಏಕಕಾಲಕ್ಕೆ ವಿಮಾನ ಹೈಜಾಕ್ ಮಾಡುವ ಬಗ್ಗೆ 6 ಹುಡುಗರ ತಂಡ ಚರ್ಚಿಸುತ್ತಿದ್ದರು ಎಂದು ಮಹಿಳೆಯೊಬ್ಬರಿಂದ ಇಮೇಲ್ ಬಂದಿದೆ. ಒಟ್ಟು 23 ಮಂದಿಯ ತಂಡ ವಿಮಾನವನ್ನು ಭಾನುವಾರ ಅಂದರೆ ಇಂದು ಅಪಹರಣ ಮಾಡಲಿದೆ ಎಂದು ತೀರ್ಮಾನಿಸಿದ್ದಾರೆ ಎಂಬುದಾಗಿ ಇಮೇಲ್ ನಲ್ಲಿ ಇದೆ.
ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕ ಒ.ಪಿ.ಸಿಂಗ್ ದೃಢಪಡಿಸಿದ್ದಾರೆ. ಹಲವು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ಧಾಣದ ನಿಯಂತ್ರಣ ಮತ್ತು ಗಸ್ತು ನೋಡಿಕೊಳ್ಳಲಾಗುತ್ತಿದೆ.
ಹಲವು ಭದ್ರತಾ ಯೋಧರನ್ನು ವಿಮಾನ ನಿಲ್ದಾಣಗಳಲ್ಲಿ ಈಗ ನಿಯೋಜಿಸಲಾಗಿದೆ.
ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ಜೊತೆ ನಗರ ಪೊಲೀಸ್ ಪಡೆ ಕೂಡ ಕಾರ್ಯಪ್ರವೃತ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


