ದೇಶ

ಮಾಜಿ ಪಿಎಂ ದೇವೇಗೌಡ ವಿರುದ್ಧ ಒಮರ್ ಅಬ್ದುಲ್ಲಾ ಟ್ವೀಟ್: ಸಿ.ಟಿ ರವಿ ತಿರುಗೇಟು

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ, ಇದಕ್ಕೆ ..

ಮಾಜಿ ಪಿಎಂ ದೇವೇಗೌಡ ವಿರುದ್ಧ ಒಮರ್ ಅಬ್ದುಲ್ಲಾ ಟ್ವೀಟ್: ಸಿ.ಟಿ ರವಿ ತಿರುಗೇಟು
ದೇವೇಗೌಡ, ಒಮರ್ ಅಬ್ದುಲ್ಲಾ ಮತ್ತು ಸಿ,ಟಿ ರವಿ
Published On :
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ, ಇದಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರನ್ನು ಪಾಕ್‌ನ ಮಾಜಿ ಅಧ್ಯಕ್ಷ ಫರ್ವೆಜ್ ಮುಶ್ರಫ್ ಅವರಿಗೆ ಹೋಲಿಕೆ ಮಾಡಿರುವ ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ  ಸಿಟಿ ರವಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಭಾರತದ ಸೇನಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕ್‌ ಗಲ್ಲು ಶಿಕ್ಷೆ ವಿಧಿಸಿರುವ ಬಗ್ಗೆ  ಟಿವಿ ಚಾನಲ್‌ವೊಂದು ಪರ್ವೇಜ್ ಮುಶ್ರಫ್ ಅವರ ಸಂದರ್ಶನ ನಡೆಸಿತ್ತು. ಈ ಸಂದರ್ಶನದ ಬಗ್ಗೆ ಓಮರ್ ಅಬ್ದುಲ್ಲಾ ಅವರು ಟೀಕೆ ಮಾಡಿದ್ದು, ಮುಶ್ರಫ್‌ರನ್ನು ಸಂದರ್ಶನ ಮಾಡುವುದು ಭಾರತದ ಅಭಿವೃದ್ಧಿ ಬಗ್ಗೆ ಪಾಕ್‌ನ ಮಾಧ್ಯಮಗಳು ದೇವೇಗೌಡರ ಜೊತೆ ಚರ್ಚಿಸುವುದು ಒಂದೇ ಎಂದು ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದರು.
ಕರ್ನಾಟಕದ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕೂಡ ಆಕ್ರೋಶ ವ್ಯಕ್ತಪಡಿಸದ್ದಾರೆ, ದೇವೇಗೌಡರು ಕರ್ನಾಟಕದ ಮಣ್ಣಿನ ಮಗ. ದೇವೇಗೌಡರು ದೇಶಕ್ಕೆ ನೀಡಿದ ಕೊಡುಗೆಯನ್ನು ಅಬ್ದುಲ್ಲಾ ಕುಟುಂಬ ಕನಸಿನಲ್ಲಿಯೂ ಮಾಡಲಾಗದು ಎಂದು ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.