ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪಿಡಿಪಿ ಕಾರ್ಯಕರ್ತ ಸಾವು, 2 ಜನರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಪಿಡಿಪಿ (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ) ಕಾರ್ಯಕರ್ತ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಪಿಡಿಪಿ (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ) ಕಾರ್ಯಕರ್ತ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪುಲ್ವಾಮ ಜಿಲ್ಲೆಯ ರಜ್ಪೊರಾ ಪ್ರದೇಶದಲ್ಲಿರುವ ಪಿಡಿಪಿ ಕಾರ್ಯಕರ್ತ ಬಷೀರ್ ಅಹ್ಮದ್ ದಾರ್ (45) ಅವರ ಮನೆಗೆ ಕಳೆದ ರಾತ್ರಿ ನುಗ್ಗಿರುವ ಉಗ್ರರು, ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಉಗ್ರರ ಗುಂಡಿನ ದಾಳಿಯಿಂದಾಗಿ ಅಹ್ಮದ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ವೇಳೆ ಮತ್ತೊಬ್ಬ ವ್ಯಕ್ತಿ ಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಹ್ಮದ್ ದಾರ್ ಅವರ ಮನೆಗೆ ನುಗ್ಗುವುದಕ್ಕೂ ಮುನ್ನ ಉಗ್ರರು, ಸ್ಥಳೀಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಲ್ತಾಫ್ ಅಹ್ಮದ್ ದಾರ್ ಎಂಬುವವರ ಮೇಲೂ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಅಲ್ತಾಫ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾಲುಗಳಿಗೆ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಷೀರ್ ಅಹ್ಮದ್ ದಾಲ್ ಹಾಗೂ ಅಲ್ತಾಫ್ ಅಹ್ಮದ್ ಇಬ್ಬರೂ ಆಡಳಿತಾರೂಢ ಪಿಡಿ ಪಕ್ಷದ ಕಾರ್ಯಕರ್ತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


