ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ: ರೈಲ್ವೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸರ್ಕಾರಿ ಪೊಲೀಸರು (ಜಿಪಿಆರ್) ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

Published On :
ರಾಮ್'ಪುರ: ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸರ್ಕಾರಿ ಪೊಲೀಸರು (ಜಿಪಿಆರ್) ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಉತ್ತರಪ್ರದೇಶದ ರಾಮ್'ಪುರದಲ್ಲಿ ನಿನ್ನೆಯಷ್ಟೇ ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಹಳಿತಪ್ಪಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿತ್ತು.
ಪ್ರಕರಣ ಸಂಬಂಧ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದರು. ಆಲ್ಲದೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರೂ.50 ಸಾವಿರ ಹಾಗೂ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದರು.
ಇದೀಗ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ರೈಲ್ವೇ ಸರ್ಕಾರಿ ಪೊಲೀಸರು ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶFIRಎಫ್ಐಆರ್ರೈಲು ಅಪಘಾತRailway OfficialsRail accidentRajya Rani Expressರಾಜ್ಯ ರಾಣಿ ಎಕ್ಸ್\'ಪ್ರೆಸ್ರೈಲ್ವೇ ಅಧಿಕಾರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


