ಸೈನಿಕರನ್ನು ಅಗೌರವದಿಂದ ಕಾಣುವವರಿಗೆ ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು: ಯೋಗೇಶ್ವರ್ ದತ್
ದೇಶ ವಿರೋಧಿಗಳ ವಿರುದ್ಧ ಸೆಣಸುವಾಗಿ ಸೇನಾಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಹೇಳಿದ್ದಾರೆ.

ಸೋನಿಪತ್: ದೇಶ ವಿರೋಧಿಗಳ ವಿರುದ್ಧ ಸೆಣಸುವಾಗಿ ಸೇನಾಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಯ ಯೋಧರ ಮೇಲೆ ನಡೆದ ಹಲ್ಲೆ ಕುರಿತಂತೆ ಭಾನುವಾರು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯೋಗೇಶ್ವರ್ ದತ್ ಅವರು, ಯಾರೇ ಆಗಲಿ ದೇಶ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರೆ ಅಂತಹವ ವಿರುದ್ಧ ಹೋರಾಟಕ್ಕೆ ಸೇನಾಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು. ಶ್ರೀನಗರದಲ್ಲಿ ಸೇನಾಪಡೆಯ ಯೋಧರಿಗಾಗ ಅವಮಾನ ನಿಜಕ್ಕೂ ಇಡೀ ದೇಶದ ತಲೆತಗ್ಗಿಸುವಂತೆ ಮಾಡಿದೆ. ದೇಶ ಕಾಯುವ ಯೋಧರಿಗೆ ದೇಶವಾಸಿಗಳಾದ ನಾವು ನೀಡುವ ಗೌರವ ಇದೆ ಏನೂ?
ಯಾರೇ ಆಗಲಿ ದೇಶ ವಿರಓಧಿ ಚಟುವಟಿಕೆಯಲ್ಲಿ ಪಾಲ್ಗೊಂಡರೆ ಅಂತಹವರ ವಿರುದ್ಧ ಕಾರ್ಯಾಚರಣೆಯಲ್ಲಿ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು, ಸೈನಿಕರನ್ನು ಅಗೌರವದಿಂದ ಕಾಣುವವರಿಗೆ ಕಂಡಲ್ಲೇ ಗುಂಡಿಟ್ಟು ಕೊಲ್ಲಬೇಕು. ಇಲ್ಲವಾದಲ್ಲಿ ಇಂತಹ ಘಟನೆಗಳು ನಿಲ್ಲುವುದಿಲ್ಲ ಎಂದು ಯೋಗೀಶ್ವರ್ ದತ್ ಹೇಳಿದ್ದಾರೆ.
ಈ ಹಿಂದೆ ಇದೇ ಘಟನೆ ಸಂಬಂಧ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹಾಗೂ ವೀರೇಂದ್ರ ಸೆಹ್ವಾಗ್ ಕಿಡಿಕಾರಿದ್ದರು. ಅವರ ಟ್ವೀಟ್ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


