ದಿನಕರನ್'ಗೆ ಮತ್ತಷ್ಟು ಸಂಕಷ್ಟ: ಮಧ್ಯವರ್ತಿಯಿಂದ ರೂ.1.3 ಕೋಟಿ ವಶಕ್ಕೆ ಪಡೆದ ಪೊಲೀಸರು
ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಮಧ್ಯವರ್ತಿಯೊಬ್ಬರಿಂದ...

Published On :
ನವದೆಹಲಿ: ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಮಧ್ಯವರ್ತಿಯೊಬ್ಬರಿಂದ ರೂ.1.3 ಕೋಟಿ ಹಣವನ್ನು ದೆಹಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಮಧ್ಯವರ್ತಿ ಸುಖೇಶ್ ಚಂದ್ರಶೇಖರ್ ಎಂಬಾತನಿಂದ ರೂ.1.3 ಕೋಟಿ ಹಣವನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ತಮ್ಮ ಬಣಕ್ಕೆ ಎಐಎಡಿಎಂಕೆ ಪಕ್ಷ ಚಿನ್ಹೆ ಎರಡು ಎಲೆಗಳ ಗುರುತನ್ನು ನೀಡಬೇಕು ಎಂದು ಹೇಳಿ ಟಿಟಿವಿ ದಿನಕರನ್ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಮೇರೆಗೆ ಈ ಹಿಂದೆ ಎಫ್ಐಆರ್ ದಾಖಲಾಗಿತ್ತು.
ನಿನ್ನೆಯಷ್ಟೇ ಚೆನ್ನೈನ ವಿವಿಧೆಡೆ ದಾಳಿ ಮಾಡಿದ್ದ ಅಧಿಕಾರಿಗಳು ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದ್ದರು. ಈ ವೇಳೆ ಚುನಾವಣಾ ಆಯೋಗದ ಮಧ್ಯವರ್ತಿ ಎಂದು ಹೇಳಲಾಗುತ್ತಿರುವ ಸುಖೇಶ್ ಚಂದ್ರಶೇಖರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಶಶಿಕಲಾ ಬಣದಿಂದ ಲಂಚ ಪಡೆದಿದ್ದು ನಿಜ ಎಂದು ಸುಖೇಶ್ ಚಂದ್ರಶೇಖರ್ ಒಪ್ಪಿಕೊಂಡಿದ್ದ.
ಸುಖೇಶ್ ನೀಡಿದ ಮಾಹಿತಿ ಆಧಾರದ ಮೇರೆಗೆ ದೆಹಲಿ ಪೊಲೀಸರು ಇಂದೂ ಕೂಡ ಕಾರ್ಯಾಚರಣೆ ನಡೆಸಿದ್ದು, 1.3 ಕೋಟಿಯಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಂತೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳನ್ನು ನಿರಾಕರಿಸುತ್ತಿರುವ ಟಿಟಿವಿ ದಿನಕರನ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AIADMKChennaiಚೆನ್ನೈದೆಹಲಿ ಪೊಲೀಸ್ಚುನಾವಣಾ ಆಯೋಗಎಐಎಡಿಎಂಕೆElection Commission. TTV DinakaranMiddleman. Delhi policeಟಿಟಿವಿ ದಿನಕರನ್. ಮಧ್ಯವರ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


