ಮೋದಿ ಸ್ವಾಗತಕ್ಕೆ ಸಾವಿರಾರು ಬೈಕ್ ಗಳು, 75 ಸಾವಿರ ಯುವಕ, ಯುವತಿಯರ ದಂಡು!
ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಭಾನುವಾರ ರಾತ್ರಿ ಸೂರತ್ ಗೆ ಆಗಮಿಸಿದ್ದು, ಈ ವೇಳೆ ಭರ್ಜರಿ ರೋಡ್ ಶೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು.

ಸೂರತ್: ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಭಾನುವಾರ ರಾತ್ರಿ ಸೂರತ್ ಗೆ ಆಗಮಿಸಿದ್ದು, ಈ ವೇಳೆ ಭರ್ಜರಿ ರೋಡ್ ಶೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು.
2014ರಲ್ಲಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸೂರತ್ ಗೆ ಭೇಟಿ ನೀಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಜನ ಕಿಕ್ಕಿರಿದು ನೆರೆದಿದ್ದರು. ಈ ಭಾರಿ ರೋಡ್ ಶೋ ನಲ್ಲಿ ಸುಮಾರು 75 ಸಾವಿರಕ್ಕೂ ಅಧಿಕ ಯುವಕ ಯುವತಿಯರು ಪಾಲ್ಗೊಂಡಿದ್ದರು. ತ್ರಿವರ್ಣ ಧ್ವಜ ಹಿಡಿದು ‘ಭಾರತ್ ಮಾತಾ ಕೀ ಜೈ' ಘೋಷಣೆ ಕೂಗುತ್ತಾ ನಿಂತಿದ್ದ ಜನರು, ರೋಡ್ ಶೋ ಉದ್ದಕ್ಕೂ ಮೋದಿಯವರನ್ನು ಅಭಿನಂದಿಸಿದರು. ಮೋದಿ ತಮ್ಮ ಮೇಲ್ಛಾವಣಿ ತೆರೆದ ಕಾರಿನಲ್ಲಿ ಜನರತ್ತ ಕೈಬೀಸಿ ಅಭಿನಂದನೆ ಸ್ವೀಕರಿಸಿದರು. ಪ್ರತಿ 200 ಮೀಟರ್ ಗೊಂದು ಸ್ವಾಗತ ಕೇಂದ್ರ ರಚಿಸಲಾಗಿತ್ತು.
ಇದರಲ್ಲಿ ಯುವಕರು, ಮಹಿಳೆಯರು ಮತ್ತು ವಿವಿಧ ಸಮುದಾಯ ಸಂಘಟನೆಗಳ ಪ್ರಮುಖರು ಪ್ರಧಾನಿಯವರನ್ನು ಸ್ವಾಗತಿಸಿದರು. 11 ಕಿ.ಮೀ. ರಸ್ತೆಯುದ್ದಕ್ಕೂ ಸರ್ಕಾರದ ವಿವಿಧ ಯೋಜನೆಗಳ ಹೆಸರುಗಳನ್ನು ಮುದ್ರಿಸಲಾಗಿದ್ದ ಸೀರೆಯನ್ನು ಕಟ್ಟಲಾಗಿತ್ತು. ವಿಮಾನ ನಿಲ್ದಾಣದ ಬಳಿ 22 ಅಡಿ ಎತ್ತರದ ಕಟೌಟ್ ನಿಲ್ಲಿಸಲಾಗಿದ್ದು, ಇಲ್ಲಿ ಸಾರ್ವಜನಿಕರಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಗುಜರಾತ್ ನಲ್ಲಿ ಭಾನುವಾರ ನಡೆದ ಮೋದಿಯವರ ಈ ಬೃಹತ್ ರೋಡ್ ಶೋ, ಚುನಾವಣೆಯ ದೃಷ್ಟಿಯಿಂದ ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯ ಪಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


