ಸೇನಾ ವಾಹನಕ್ಕೆ ಪ್ರತಿಭಟನಾಕಾರನ ಕಟ್ಟಿದ ಪ್ರಕರಣ: ಸೇನೆ ವಿರುದ್ಧ ಎಫ್ ಐಆರ್ ದಾಖಲು!
ಪ್ರತಿಭಟನಾಕಾರನೋರ್ವನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಶ್ರೀನಗರ: ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಸೈನಿಕರು ಮತ್ತು ಪ್ರತಿಭಟನಾಕಾರರ ಸಂಘರ್ಷ ತಾರಕಕ್ಕೇರಿದ್ದ ಬೆನ್ನಲ್ಲೇ ಪ್ರತಿಭಟನಾಕಾರನೋರ್ವನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದ ಈ ವಿಡಿಯೋಗೆ ಸಂಬಂಧಿಸಿದಂತೆ ಇದೀಗ ಶ್ರೀನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಕಾಶ್ಮೀರದ ಯುವಕನೊಬ್ಬನನ್ನು ಸೇನೆಯ ಜೀಪಿನ ಬಾನೆಟ್ ಗೆ ಕಟ್ಟಿ ಮಾನವ ತಡೆಗೋಡೆಯಾಗಿ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನೆಯ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ಜೀಪಿಗೆ ಕಟ್ಟಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ಅಲ್ಲದೆ ಈ ಕೃತ್ಯವನ್ನು ಯೋಧರೇ ಮಾಡಿದ್ದು ಎಂದು ಆರೋಪಿಸಿ ಯೋಧರ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಸಿಎಂ ಮುಫ್ತಿ ಮೆಹಬೂಬ ಅವರು ಪೊಲೀಸರಿಂದ ವರದಿ ಕೇಳಿದ್ದರು. ಅಂತೆಯೇ ಭಾರತೀಯ ಸೇನೆ ಕೂಡ ಆಂತರಿಕ ತನಿಖೆಗೆ ಆದೇಶ ನೀಡಿತ್ತು. ಇನ್ನು ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದರು.
ಇನ್ನು ಭಾರತೀಯ ಸೇನೆ ವಿರುದ್ಧ ದಾಖಲಾಗಿರುವ ಎಫ್ ಐಆರ್ ನಲ್ಲಿ ವ್ಯಕ್ತಿಯ ಅಪಹರಣ ಮತ್ತು ಆತನ ಪ್ರಾಣಕ್ಕೆ ಹಾನಿ ತಂದೊಡ್ಡಿದ ಕುರಿತು ದೂರು ದಾಖಲಿಸಿಕೊಳ್ಳಲಾಗಿದೆ.
ಇದೇ ಏಪ್ರಿಲ್ 9ರಿಂದ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗೆಲೆದಿದ್ದು, ಕಣಿವೆ ರಾಜ್ಯದಲ್ಲಿ ಅಡಗಿದ್ದ ಉಗ್ರರಿಗಾಗಿ ಸೇನಾಪಡೆಯ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ಯುವಕರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಸೇನೆಯತ್ತ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಲಾಠಿ ಪ್ರಹಾರ ಕೂಡ ನಡೆದಿತ್ತು. ಅಂದಿನಿಂದ ಕಾಶ್ನೀರದಲ್ಲಿ ಸೇನಾಪಡೆಗಳ ವಿರುದ್ಧ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ಇತ್ತೀಚೆಗಷ್ಟೇ ಯೋಧನೋರ್ವನನ್ನು ಸ್ಥಳೀಯರು ಥಳಿಸಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


