ದೇಶ

ಮುಸ್ಲಿಂ ಮೀಸಲಾತಿ ವಿರೋಧಿಸಿ ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ, ಪ್ರತಿಪಕ್ಷ ನಾಯಕರ ಬಂಧನ

ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಒದಗಿಸಲು ಮುಂದಾಗಿರುವ ಕೆ.ಚಂದ್ರಶೇಖರ್ ರಾವ್ ಸರ್ಕಾರದ...

ಮುಸ್ಲಿಂ ಮೀಸಲಾತಿ ವಿರೋಧಿಸಿ ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ, ಪ್ರತಿಪಕ್ಷ ನಾಯಕರ ಬಂಧನ
ಕೆ.ಚಂದ್ರಶೇಖರ್ ರಾವ್
Published On :
ಹೈದರಾಬಾದ್: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಒದಗಿಸಲು ಮುಂದಾಗಿರುವ ಕೆ.ಚಂದ್ರಶೇಖರ್ ರಾವ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸೋಮವಾರ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ಹಲವು ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆಯಷ್ಟೇ ಬಿಜೆಪಿ ವಿಧಾನಸಭೆ ಒಳಗೆ ಮತ್ತು ಹೊರಗೆ ಮುಸ್ಲಿಂ ಮೀಸಲಾತಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ, ಇಂದು ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಮುಸ್ಲಿಂ ಮೀಸಲಾತಿ ಅಸಂವಿಧಾನಿಕ ಎಂದು ಆರೋಪಿಸಿರುವ ಬಿಜೆಪಿ ಅದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು. ಹೀಗಾಗಿ ನೂರಾರು ಕಾರ್ಯಕರ್ತರು ಹಾಗೂ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೆಲಂಗಾಣ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ಶೇ.4ರಿಂದ 12ಕ್ಕೆ ಹೆಚ್ಚಿಸುವ ಮೀಸಲಾತಿ ಮಸೂದೆಯನ್ನು ಭಾನುವಾರ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಿದೆ. ಆದರೆ ಮಸೂದೆ ಒಂದು ರದ್ದಿ ಕಾಗದ ಎಂದಿರುವ ಬಿಜೆಪಿ, ಮಸೂದೆ ರಾಷ್ಟ್ರಪತಿಗಳಿಂದ ತಿರಸ್ಕೃತಗೊಳ್ಳಲಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.