ಅಖಿಲೇಶ್ ಸಮಾಜವಾದಿ ಪಕ್ಷದ ಗಾದಿಯನ್ನು ಮುಲಾಯಂಗೆ ಹಿಂದಿರುಗಿಸಬೇಕು: ಶಿವಪಾಲ್ ಯಾದವ್
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಸ್ಥಾನವನ್ನು...

Published On :
ಮೈನ್ಪುರಿ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಸ್ಥಾನವನ್ನು ಮುಲಾಯಂ ಸಿಂಗ್ ಯಾದವ್ ಅವರಿಗೆ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ ಶಿವಪಾಲ್ ಯಾದವ್ ಒತ್ತಾಯಿಸಿದ್ದಾರೆ.
ಅಖಿಲೇಶ್ ಅವರು ಮೊದಲು ಪಕ್ಷವನ್ನು ಮತ್ತು ಕುಟುಂಬವನ್ನು ಒಗ್ಗೂಡಿಸಬೇಕಾಗಿದೆ ಎಂದು ಹೇಳಿದರು.
ಅವರು ಮೊದಲು ಕುಟುಂಬ ಮತ್ತು ಸಮಾಜವಾದಿ ಪಕ್ಷದ ನಾಯಕರನ್ನು ಒಂದು ಮಾಡಬೇಕು. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು. ತಮ್ಮ ನೈತಿಕ ಕರ್ತವ್ಯಗಳನ್ನು ಮುಗಿಸಬೇಕು. ಮುಲಾಯಂ ಸಿಂಗ್ ಯಾದವ್ ಅವರೇ ಪಕ್ಷದ ರಾಷ್ಟ್ರಾಧ್ಯಕ್ಷರು ಎಂದು ಒಪ್ಪಿಕೊಳ್ಳಬೇಕು ಎಂದು ಶಿವಪಾಲ್ ಯಾದವ್ ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಕಳಪೆ ಫಲಿತಾಂಶಕ್ಕೆ ಅಖಿಲೇಶ್ ಕಾರಣ ಎಂದು ಇತ್ತೀಚೆಗೆ ಆರೋಪಿಸಿದ್ದ ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಪುತ್ರ ಹೀನಾಯವಾಗಿ ಅವಮಾನಿಸಿದ್ದಾರೆ. ತಂದೆಗೆ ವಿಧೇಯನಾಗಿರದವರು, ಬೇರೆ ಯಾರಿಗೂ ವಿಧೇಯನಾಗಿರಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಜನತೆ ತೀರ್ಮಾನಿಸಿದ್ದಾರೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಲಾಯಂ ಸಿಂಗ್ ಯಾದವ್Mulayam Singh YadavUttar pradeshಉತ್ತರ ಪ್ರದೇಶಸಮಾಜವಾದಿ ಪಕ್ಷSamajwadi PartyAkhilesh Yadavಅಖಿಲೇಶ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


