ದೇಶ

'ತ್ರಿವಳಿ ತಲಾಖ್' ವಿವಾದ ಕುರಿತು ಹೇಳಿಕೆ: ಯೋಗಿ ಆದಿತ್ಯನಾಥ್'ಗೆ ಬಿಜೆಪಿ ಬೆಂಬಲ

ತ್ರಿವಾಳಿ ತಲಾಖ್ ಕುರಿತಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ್ದ ಹೇಳಿಕೆಗೆ ಬಿಜೆಪಿ ಮಂಗಳವಾರ ಬೆಂಬಲ ವ್ಯಕ್ತಪಡಿಸಿದೆ...

'ತ್ರಿವಳಿ ತಲಾಖ್' ವಿವಾದ ಕುರಿತು ಹೇಳಿಕೆ: ಯೋಗಿ ಆದಿತ್ಯನಾಥ್'ಗೆ ಬಿಜೆಪಿ ಬೆಂಬಲ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Published On :
ಸಹಿದಾಂದ್: ತ್ರಿವಾಳಿ ತಲಾಖ್ ಕುರಿತಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ್ದ ಹೇಳಿಕೆಗೆ ಬಿಜೆಪಿ ಮಂಗಳವಾರ ಬೆಂಬಲ ವ್ಯಕ್ತಪಡಿಸಿದೆ. 
ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಂಜೀವ್ ಬಲ್ಯಾನ್ ಅವರು, ತ್ರಿವಳಿ ತಲಾಖ್ ವಿರುದ್ಧ ಪ್ರತೀಯೊಬ್ಬರೂ ನಿಲ್ಲಬೇಕು. ಮಹಿಳೆಯರಿಗೆ ನೀಡಬೇಕಿರುವ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ನೀಡಬೇಕು. ಮಹಿಳೆಯರ ಸಬಲೀಕರಣದ ಬಗ್ಗೆ ನಾವು ಮಾತುನಾಡುವುದಾದರೆ, ತ್ರಿವಳಿ ತಲಾಖ್ ವ್ಯವಸ್ಥೆಯನ್ನೇಕೆ ತೊಡೆದು ಹಾಕಬಾರದು?...ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ಹಾಗೂ ಅವರು ತೆಗೆದುಕೊಳ್ಳುವ ಕ್ರಮಗಳನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆಂದು ಹೇಳಿದ್ದಾರೆ. 
ತ್ರಿವಳಿ ತಲಾಖ್ ಕುರಿತಂತೆ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಯೋಗಿ ಆದಿತ್ಯನಾಥ್ ಅವರು, ತ್ರಿವಳಿ ತಲಾಖ್  ಅನ್ನು ಹಿಂದೂಗಳ ಪುರಾಣ ಗ್ರಂಥ ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಹೋಲಿಕೆ ಮಾಡಿದ್ದರು. ಜ್ವಲಂತ ಸಮಸ್ಯೆಯಾಗಿರುವ ತ್ರಿವಳಿ ತಲಾಖ್ ಬಗ್ಗೆ ಮೌನ ವಹಿಸುವುದು ದ್ರೌಪದಿಯ ವಸ್ತ್ರಾಪಹರಣದಷ್ಟೇ ಸಮಾನ ತಪ್ಪು. ಚಂದ್ರಶೇಖರ್ ಕೂಡ ಸಮಾನ ನಾಗರಿಕ ಸಂಹಿತೆಯ ಪರವಾಗಿದ್ದರು. ಎಲ್ಲಾ ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.