ಡಿವೈಡರ್ ಮೇಲೆ ನಿಂತಿದ್ದ ಐವರ ಮೇಲೆ ಹರಿದ ಕಾರು, 3 ವರ್ಷದ ಮಗು ಸಾವು
ರಸ್ತೆ ವಿಭಜಕದ ಮೇಲೆ ನಿಂತಿದ್ದ ಐವರ ಮೇಲೆ ಕಾರು ಹರಿದಿದ್ದು, ಈ ಭೀಕರ ಅಪಘಾತದಲ್ಲಿ ಮೂರು ವರ್ಷದ ಮಗು ಸ್ಥಳದಲ್ಲೇ ....

Published On :
ಪುಣೆ: ರಸ್ತೆ ವಿಭಜಕದ ಮೇಲೆ ನಿಂತಿದ್ದ ಐವರ ಮೇಲೆ ಕಾರು ಹರಿದಿದ್ದು, ಈ ಭೀಕರ ಅಪಘಾತದಲ್ಲಿ ಮೂರು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ ಮತ್ತು ಆ ಮಗುವಿನ ತಾಯಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಪುಣೆಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬನೇರ್ ಗೋತನ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆ ದಾಟಲು ವಿಭಜಕದ ಮೇಲೆ ನಿಂತಿದ್ದ ವೇಳೆ ಅತಿ ವೇಗವಾಗಿ ಬಂದ ಕಾರು ಐವರ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಮಗು ಮತ್ತು ತಾಯಿ 30 ಅಡಿಗೂ ಹೆಚ್ಚು ದೂರಕ್ಕೆ ಬಿದ್ದಿದ್ದರು.
ಅಪಘಾತದಲ್ಲಿ ಮೃತಪಟ್ಟ ಮಗು ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ತಾಯಿ ಪೂಜಾ ಸೇರಿದಂತೆ ನಾಲ್ವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಸುಜಾತ ಜಯಪ್ರಕಾಶ್ ಶ್ರೋಫ್ ಬಂಧಿಸಲಾಗಿದ್ದು, ಸುಜಾತ ಬಿಲ್ಡರ್ ಒಬ್ಬರ ಪತ್ನಿ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


