ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಮಂಗಳವಾರ ತಿಳಿದುಬಂದಿದೆ.
ಮೆಂಧಾರ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಮೂಲಗಳು ತಿಳಿಸಿವೆ.
ರೌಜರಿ ಜಿಲ್ಲೆಯ ನೌಶೆರಾದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಿನ್ನೆಯಿಂದಲೂ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಮಾರ್ಟರ್ ಲ್ ಹಾಗೂ ಗುಂಡಿನ ದಾಳಿಯನ್ನು ನಡೆಸುತ್ತಲೇ ಇದೆ.
ಮಾರ್ಟರ್ ಶೆಲ್ ಹಾಗೂ ಗುಂಡಿನ ದಾಳಿಗೆ 12 ಕ್ಕೂ ಹೆಚ್ಚು ಸ್ಥಳೀಯ ಜಾನುವಾರುಗಳು ಮೃತಪಟ್ಟಿವೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದ್ದು, ಸ್ಥಳದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನಿನ್ನೆ ಬೆಳಿಗ್ಗೆ 8 ಗಂಟೆಯಿಂದಲೂ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ಆರಂಭಿಸಿದ್ದು, ಗುಂಡಿನ ಚಕಮಕಿ ಸಂಜೆವರೆಗೂ ಮುಂದುವರೆದಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ದಾಳಿಗೆ ಸೇನೆ ದಿಟ್ಟ ಉತ್ತರ: 8 ಪಾಕ್ ಸೈನಿಕರ ಹತ್ಯೆ
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೈನಿಕರು ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಈ ವರೆಗೂ 8 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and KashmirPoonchಪೂಂಚ್martyrಹುತಾತ್ಮಗಡಿ ನಿಯಂತ್ರಣ ರೇಖೆಭಾರತೀಯ ಸೇನೆLoC
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


