'ಜಾಧವ್' ರಕ್ಷಣೆ ಕುರಿತಂತೆ ಕೇಂದ್ರಕ್ಕೆ ನಿರ್ದೇಶನ ನೀಡಿ: ದೆಹಲಿ ನ್ಯಾಯಾಲಯದಲ್ಲಿ ಪಿಐಎಲ್ ದಾಖಲು
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಅವರ ರಕ್ಷಣೆ ಕುರಿತಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್'ನಲ್ಲಿ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು...

Published On :
ನವದೆಹಲಿ: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಅವರ ರಕ್ಷಣೆ ಕುರಿತಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್'ನಲ್ಲಿ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.
ಜಾಧವ್ ರಕ್ಷಣೆ ಕುರಿತಂತೆ ನ್ಯಾಯಕ್ಕಾಗಿ ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರೊಬ್ಬರು ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ರಾಹುಲ್ ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದಾರೆ. ಪಾಕಿಸ್ತಾನದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಾಧವ್ ಅವರನ್ನು ರಕ್ಷಣೆ ಮಾಡುವಲ್ಲಿ ಹಾಗೂ ನ್ಯಾಯಕ್ಕಾಗಿ ವಿದೇಶಾಂಗ ಸಚಿವಾಲಯ ಹಾಗೂ ಗೃಹ ಸಚಿವಾಲಯಕ್ಕೆ ನ್ಯಾಯಾಲಯ ಸೂಕ್ತ ರೀತಿಯ ನಿರ್ದೇಶನವನ್ನು ನೀಡಬೇಕಿದೆ.
ನೌಕಾಪಡೆಯ ಮಾಜಿ ಅಧಿಕಾರಿಯನ್ನು ಪಾಕಿಸ್ತಾನ ಅಕ್ರಮವಾಗಿ ಬಂಧಿಸಿದ್ದೂ ಅಲ್ಲದೆ, ಗಲ್ಲುಶಿಕ್ಷೆಯನ್ನು ವಿಧಿಸಿದೆ. ಹೀಗಾಗಿ ಜಾಧವ್ ಅವರಿಗೆ ರಾಯಭಾರಿ ನೆರವು ನೀಡುವ ಸಂಬಂಧ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗುವಂತೆ ಸೂಚನೆ ನೀಡಬೇಕೆಂದು ಪಿಐಎಲ್ ನಲ್ಲಿ ರಾಹುಲ್ ಹೇಳಿಕೊಂಡಿದ್ದಾರೆ. ಅರ್ಜಿ ವಿಚಾರಣೆ ನಾಳೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


