ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಸಂದರ್ಭ ಎದ್ದು ನಿಲ್ಲಲು ವಿಶೇಷ ಚೇತನರಿಗೆ ವಿನಾಯ್ತಿ: ಸುಪ್ರೀಂ ಕೋರ್ಟ್
ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಪ್ರಸಾರ ಸಂದರ್ಭದಲ್ಲಿ ಎದ್ದು...

Published On :
ನವದೆಹಲಿ: ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಪ್ರಸಾರ ಸಂದರ್ಭದಲ್ಲಿ ಎದ್ದು ನಿಲ್ಲುವುದಕ್ಕೆ ವಿಶೇಷ ಚೇತನರಿಗೆ ಸುಪ್ರೀಂ ಕೋರ್ಟ್ ವಿನಾಯಿತಿ ನೀಡಿದೆ.
ಸುಪ್ರೀಂ ಕೋರ್ಟ್ ತನ್ನ ಮೊದಲ ಆದೇಶದಲ್ಲಿ, ಸಿನಿಮಾ ಮಂದಿರಗಳಿಗೆ ರಾಷ್ಟ್ರಗೀತೆ ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕೆಂದು ಆದೇಶ ನೀಡಿತ್ತು.
ವಂದೇ ಮಾತರಂನ್ನು ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಡುವುದನ್ನು ಕಡ್ಡಾಯಗೊಳಿಸುವಂತೆ ಸಲ್ಲಿಸಲಾಗಿದ್ದ ಮನವಿ ಕುರಿತು ಸಹ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೊಟೀಸ್ ಕಳುಹಿಸಿ ಪೂರ್ವ ಸಿದ್ಧತೆ ಮಾಡಿಕೊಳ್ಳಲು 4 ವಾರಗಳ ಕಾಲಾವಕಾಶ ನೀಡಿದೆ. ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 23ರಂದು ನಡೆಯಲಿದೆ.
ಮಿದುಳು ಲಕ್ವ, ಪಾರ್ಕಿನ್ಸನ್ ರೋಗ, ಸ್ನಾಯು ಕ್ಷಯ ಮತ್ತು ಅಂಗವೈಕಲ್ಯ ಮೊದಲಾದ ಖಾಯಿಲೆಗಳಿಂದ ಬಳಲುತ್ತಿರುವವರು ಮತ್ತು ವಿಶೇಷ ಚೇತನರು ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಸಂದರ್ಭದಲ್ಲಿ ಎದ್ದು ನಿಲ್ಲುವುದಕ್ಕೆ ನ್ಯಾಯಾಲಯ ವಿನಾಯ್ತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


