ಯುಎಸ್ ಡ್ರೋಣ್ ದಾಳಿಗೆ ಯೆಮೆನ್ ನ 7 ಅಲ್ ಖೈದಾ ಉಗ್ರರು ಬಲಿ
ಅಮೆರಿಕಾ ಯೆಮೆನ್ ಮೇಲೆ ಡ್ರೋಣ್ ದಾಳಿ ನಡೆಸಿದ್ದು, ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ 7 ಉಗ್ರರು ಸಾವನ್ನಪ್ಪಿದ್ದಾರೆ.

Published On :
ಸನಾ: ಅಮೆರಿಕಾ ಯೆಮೆನ್ ಮೇಲೆ ಡ್ರೋಣ್ ದಾಳಿ ನಡೆಸಿದ್ದು, ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ 7 ಉಗ್ರರು ಸಾವನ್ನಪ್ಪಿದ್ದಾರೆ.
ಯೆಮೆನ್ ನ ಈಶಾನ್ಯ ಪ್ರಾಂತ್ಯ ಮರೀಬ್ ನಲ್ಲಿ ಈ ದಾಳಿ ನಡೆದಿದ್ದು, ಅಲ್ ಖೈದಾ ಉಗ್ರ ಸಂಘಟನೆಗೆ ಇಬ್ಬರು ನಾಯಕರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಎರಡು ಪ್ರತ್ಯೇಕ ದಾಳಿಗಳಲ್ಲಿ ಅಮೆರಿಕ ಒಟ್ಟು 7 ಉಗ್ರರನ್ನು ಹತ್ಯೆ ಮಾಡಿದೆ ಎಂದು ಯೆಮೆನ್ ನ ಭದ್ರತಾ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಮೆರಿಕಾ ಯೆಮೆನ್ ನಲ್ಲಿರುವ ಅಲ್ ಖೈದಾ ಉಗ್ರರನ್ನು ಗುರಿಯಾಗಿರಿಸಿಕೊಂಡು ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಇದು ಇತ್ತೀಚಿನ ದಾಳಿಯಾಗಿದೆ. ಏ.5 ರಂದೂ ಸಹ ಇದೇ ಮಾದರಿಯ ದಾಳಿಯನ್ನು ನಡೆಸಿದ್ದ ಅಮೆರಿಕಾ ಅಲ್ ಖೈದಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


