ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಯಾತ್ಪೊರ ಗ್ರಾಮದಲ್ಲಿ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 53 ರಾಷ್ಟ್ರೀಯ ರೈಫಲ್ಸ್ ಪಡೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಇಬ್ಬರನ್ನು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ, ಸೇನಾಪಡೆ ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರನನ್ನು ಯೂನಿಸ್ ಮಕ್ಬೂಲ್ ಗನೈ ಎಂದು ಗುರ್ತಿಸಲಾಗಿದ್ದು, ಈತ ಛದೂರ್'ನ ಪತ್ರಿಗಾಮ್ ನಿವಾಸಿಯಾಗಿದ್ದಾರೆ. ಮತ್ತೊಬ್ಬ ಉಗ್ರನ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹತ್ಯೆಯಾದ ಉಗ್ರರಿಂದ ಎಕೆ.47 ರೈಫಲ್ ಗಳು ಹಾಗೂ ಸ್ಫೋಟಕ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಜಮ್ಮು ಮತ್ತು ಕಾಶ್ಮೀರJammu and Kashmirencountermilitantsಭಾರತೀಯ ಸೇನೆಎನ್ ಕೌಂಟರ್Budgam districtಬುದ್ಗಾಮ್ ಜಿಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


