ಹಿಮಾಚಲ ಸಿಎಂ, ಪತ್ನಿ ಅಕ್ರಮ ಆಸ್ತಿ ಪ್ರಕರಣ: ಸಿಬಿಐಗೆ ಕೋರ್ಟ್ ನೋಟಿಸ್
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ....

Published On :
ನವದೆಹಲಿ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಸೋಮವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಸಿಬಿಐ ಅಧಿಕಾರಿಗಳು ತನಿಖೆ ವೇಳೆ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿಲ್ಲ ಎಂದು ಆರೋಪಿಸಿ ವೀರಭದ್ರ ಸಿಂಗ್ ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿರೇಂದ್ರ ಕುಮಾರ್ ಗೋಯಲ್ ಅವರು, ಈ ಬಗ್ಗೆ ಪ್ರತಿಕ್ರೆಯ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ನೀಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಶೇಷ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದು, 2009ರಿಂದ 2011ರವರೆಗೆ ಯುಪಿಎ ಸರ್ಕಾರದಲ್ಲಿ ಉಕ್ಕು ಸಚಿವರಾಗಿದ್ದ ವೇಳೆ ವೀರಭದ್ರ ಸಿಂಗ್ ಅವರು 10 ಕೋಟಿ ರುಪಾಯಿ ಮೌಲ್ಯದ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣ ಸಂಬಂಧ ಸಿಬಿಐ ಆಧಿಕಾರಿಗಳು ವೀರಭದ್ರ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೆ, ಎಫ್ಐಆರ್ ಸಂಬಂಧ ಪ್ರಾಥಮಿಕ ತನಿಖೆಗೆ ಹಾಜರಾಗುವಂತೆ 2015ರ ಸೆ.23ರಂದು ಸಮನ್ಸ್ ಜಾರಿ ಮಾಡಿತ್ತು.
ತಮ್ಮ ಹಾಗು ತಮ್ಮ ಪತ್ನಿಯ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್ ನ್ನು ವಜಾ ಮಾಡುವಂತೆ ಸಿಂಗ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ತಮ್ಮ ಮನೆ ಮೇಲೆ ದಾಳಿ ಮಾಡುವ ಮೂಲಕ ಸಿಬಿಐ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿತ್ತು. ಅಲ್ಲದೆ, ತಮ್ಮ ವಿರುದ್ಧದ ಸಿಬಿಐ ಕ್ರಮವು ರಾಜಕೀಯ ವೈಷಮ್ಯ ಹಾಗೂ ಸೇಡಿನ ಕ್ರಮವಾಗಿತ್ತು ಎಂದು ವಾದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disproportionate assets caseಅಕ್ರಮ ಆಸ್ತಿ ಪ್ರಕರಣCBIಸಿಬಿಐnoticeನೋಟಿಸ್Virbhadra Singh\'s wifeವೀರಭದ್ರ ಸಿಂಗ್ ಪತ್ನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


