ದೇಶ

ಡಿಪ್ಲೊಮಾ ಕೋರ್ಸ್ ಗಳನ್ನು ಮಾನ್ಯ ಮಾಡುವಂತೆ ಭಾರತಕ್ಕೆ ಇಸ್ರೇಲ್ ಮನವಿ

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿಯ ಹಿನ್ನೆಲೆಯಲ್ಲಿ ಹಲವು ಒಪ್ಪಂದಗಳ ಬಗ್ಗೆ ನಿರೀಕ್ಷೆ ಮೂಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೂ ಉಭಯ ರಾಷ್ಟ್ರಗಳ ನಡುವೆ ಮಹತ್ವದ ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ.

ಡಿಪ್ಲೊಮಾ ಕೋರ್ಸ್ ಗಳನ್ನು ಮಾನ್ಯ ಮಾಡುವಂತೆ ಭಾರತಕ್ಕೆ ಇಸ್ರೇಲ್ ಮನವಿ
ಇಸ್ರೇಲ್
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿಯ ಹಿನ್ನೆಲೆಯಲ್ಲಿ ಹಲವು ಒಪ್ಪಂದಗಳ ಬಗ್ಗೆ ನಿರೀಕ್ಷೆ ಮೂಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೂ ಉಭಯ ರಾಷ್ಟ್ರಗಳ ನಡುವೆ ಮಹತ್ವದ ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ. 
ನರೇಂದ್ರ ಮೋದಿ ಅವರ ಭೇಟಿಯ ವೇಳೆ ತನ್ನ ಡಿಪ್ಲೊಮಾ ಕೋರ್ಸ್ ಗಳನ್ನು ಭಾರತ ಸರ್ಕಾರ ಮಾನ್ಯ ಮಾಡಬೇಕೆಂದು ಇಸ್ರೇಲ್ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಭಾರತದ ಮಾನವ ಸಂಪನ್ಮೂಲ ಇಲಾಖೆ(ಹೆಚ್ಆರ್ ಡಿ) ಯೊಂದಿಗೆ ಸಂಪರ್ಕದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೇಳೆ ಚರ್ಚಿಸಬಹುದಾದಂತಹ ಶೈಕ್ಷಣಿಕ ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. 
ಕೇವಲ ರಕ್ಷಣಾ ಕ್ಷೇತ್ರ ಮಾತ್ರವಲ್ಲದೇ, ಇಸ್ರೇಲ್ ಮಾನ ಸಂಪನ್ಮೂಲ ಕ್ಷೇತ್ರದಲ್ಲೂ ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು, ತನ್ನ ರಾಷ್ಟ್ರದ ಡಿಪ್ಲೊಮಾ ಕೋರ್ಸ್ ಗಳ ಮಾನ್ಯತೆ ವಿಷಯ ದ್ವಿಪಕ್ಷೀಯ ಸಂಬಂಧದ ವೇಳೆ ಚರ್ಚೆಗೆ ಬರಲಿದೆ ಎಂದು ಭಾರತದಲ್ಲಿರುವ ಇಸ್ರೇಲ್ ನ ರಾಯಭಾರಿ ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.