ಕಲ್ಲು ತೂರಾಟ, ಸೇನೆ ಪ್ರತೀಕಾರ ಅಂತ್ಯಗೊಳ್ಳುವವರೆಗೂ ಯಾವುದೇ ಮಾತುಕತೆಯಿಲ್ಲ: ಮುಫ್ತಿ
ಕಾಶ್ಮೀರದಲ್ಲಿ ಕಲ್ಲು ತೂರಾಟ ಮತ್ತು ಸೇನಾ ಪಡೆಗಳ ಪ್ರತೀಕಾರ ಅಂತ್ಯಗೊಳ್ಳುವವರೆಗೂ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ...

Published On :
ನವದೆಹಲಿ: ಕಾಶ್ಮೀರದಲ್ಲಿ ಕಲ್ಲು ತೂರಾಟ ಮತ್ತು ಸೇನಾ ಪಡೆಗಳ ಪ್ರತೀಕಾರ ಅಂತ್ಯಗೊಳ್ಳುವವರೆಗೂ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಸೋಮವಾರ ಹೇಳಿದ್ದಾರೆ.
ಕಾಶ್ಮೀರದಲ್ಲಿನ ಪ್ರಸ್ತುತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಲೋಕಕಲ್ಯಾಣ ನಗರದಲ್ಲಿರುವ ಪ್ರಧಾನಿ ಮೋದಿಯವರ ನಿವಾಸದಲ್ಲಿ ಮುಫ್ತಿಯವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸುವ ವೇಳೆ ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಬಿಜೆಪಿ-ಪಿಡಿಪಿ ಮೈತ್ರಿ, ಇತ್ತೀಚಿನ ಚುನಾವಣಾ ಸಂದರ್ಭದಲ್ಲಿ ನಡೆದ ಘರ್ಷಣೆ, ಹಿಂಸಾಚಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದೆವು ಎಂದು ಹೇಳಿದ್ದಾರೆ.
ಮಾತುಕತೆ ವೇಳೆ ಕಾಶ್ಮೀರದಲ್ಲಿ ಕಲ್ಲು ತೂರಾಟ ಮತ್ತು ಭದ್ರತಾ ಪಡೆಗಳ ಪ್ರತೀಕಾರ ಮೊದಲಾದವುಗಳು ಅಂತ್ಯಗೊಳ್ಳುವವರೆಗೂ ನಾವು ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ನಾನು ಹೇಳಿದೆ. ಇದಕ್ಕೆ ಪ್ರಧಾನಮಂತರಿ ನರೇಂದ್ರ ಮೋದಿಯವರು ಒಪ್ಪಿದ್ದಾರೆ. ಅಲ್ಲದೆ, ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ ಮಾಡುವುದಾಗಿಯೂ ಭರವಸೆ ನೀಡಿದ್ದಾರೆ ಮತ್ತು ತಿಕ್ಕಾಟವನ್ನು ನಿಲ್ಲಿಸಿ ಸಾಮರಸ್ಯ ಕಾಪಾಡಿಕೊಳ್ಳಬೇಕೆಂಬ ಮಾಜಿ ಪ್ರಧಾನಮಂತ್ರಿ ಎಬಿ ವಾಜಪೇಯಿಯವರ ನೀತಿಯನ್ನು ಅನುಸರಿಸುವಂತೆ ತಿಳಿಸಿದ ಅವರು, ತಾನೂ ಕೂಡ ವಾಜಪೇಯಿಯವರ ನೀತಿಯನ್ನು ಪಾಲಿಸುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಶಾಂತಿಯನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದರ ಬಗ್ಗೆ ತಂದೆ ಮುಫ್ತಿ ಮೊಹಮ್ಮದ ಸಯೀದ್ ಅವರು ಮಾರ್ಗಸೂಚಿ ನೀಡಿದ್ದಾರೆ. ಸಮಸ್ಯೆ ಬಗೆಹರಿಸಲು ಮಾತುಕತೆಯ ಅಗತ್ಯವಿದೆ. ನಮ್ಮ ಸ್ವಂತ ಜನರನ್ನು ಮತ್ತಷ್ಟು ಕಾಲ ಬಲಿಕೊಡಲು ಸಾಧ್ಯವಿಲ್ಲ.
ಸಿಂಧೂ ನದಿ ಜಲ ಒಪ್ಪಂದದಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವ ರೀತಿಯ ನಷ್ಟವುಂಟಾಗುತ್ತಿದೆ ಎಂಬುದರ ಬಗ್ಗೆಯೂ ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿದ್ದೇನೆಂದು ತಿಳಿಸಿದ್ದಾರೆ.
ಇದೇ ವೇಳೆ ಕಾಶ್ಮೀರ ಸಮಸ್ಯೆ ಶೀಘ್ರದಲ್ಲಿಯೇ ಬಗೆಹರಿಯುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಭ್ರಮೆಯಲ್ಲಿರುವ ಜನರು ಹಾಗೂ ಪ್ರಚೋದನೆಗೊಳಪಡುತ್ತಿರುವವರ ಕುರಿತಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಪ್ರಧಾನಿ ಭೇಟಿಗೂ ಮುನ್ನ ಗೃಹ ಸಚಿವರನ್ನು ಭೇಟಿಯಾದ ಮುಫ್ತಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜೊತೆಗೆ ಮಾತುಕತೆ ನಡೆಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಗುಪ್ತಚರ ದಳ ನಿರ್ದೇಶಕರನ್ನು ಭೇಟಿಯಾದ ಮುಫ್ತಿಯವರು ಕಾಶ್ಮೀರ ಭದ್ರತೆ ಕುರಿತಂತೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Modiಜಮ್ಮು ಮತ್ತು ಕಾಶ್ಮೀರJammu and Kashmirsecurityಭದ್ರತೆMehbooba Muftiಮೆಹಬೂಬಾ ಮುಫ್ತಿಮೋದಿಕಲ್ಲು ತೂರಾಟStone pelting
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


