ದೇಶ

ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಭಿನ್ನಮತವಿಲ್ಲ: ರಾಮ್ ಮಾಧವ್

ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದೆ.

ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಭಿನ್ನಮತವಿಲ್ಲ: ರಾಮ್ ಮಾಧವ್
ರಾಮ್ ಮಾಧವ್
Published On :
ನವದೆಹಲಿ: ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದೆ. 
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ಇದೆ. ಒಂದೆರಡು ತಿಂಗಳಲ್ಲಿ ಕಾಶ್ಮೀರವನ್ನು ಸಾಮಾನ್ಯ ಸ್ಥಿತಿಗೆ ಮರಳಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ. 
ವಿಧಾನ ಪರಿಷತ್ ಚುನಾವಣೆಯ ವಿಷಯವಾಗಿ ಒಂದಷ್ಟು ಗೊಂದಲಗಳಿದ್ದವು. ಸೂಕ್ತ ಸಂವಹನದ ಸಮಸ್ಯೆಯಿಂದಾಗಿ ಈ ಗೊಂದಲ ಎದುರಾಗಿದೆ ಎಂದು ತಿಳಿದುಬಂದಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.