ಸುದೀರ್ಘ ಪ್ರತಿಭಟನೆ ಬಳಿಕ ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ: ಮುಚ್ಚಿದ್ದ ಶಾಲೆ-ಕಾಲೇಜುಗಳು ಆರಂಭ
ಸುಧೀರ್ಘ ಹಿಂಸಾಚಾರ ಪ್ರತಿಭಟನೆಗಳಿಂದಾಲಿ ಕಾಶ್ಮೀರದಲ್ಲಿ ಮುಚ್ಚಲಾಗಿದ್ದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಮತ್ತೆ ಸೋಮವಾರದಿಂದ ತನ್ನ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು...

Published On :
ಶ್ರೀನಗರ: ಸುದೀರ್ಘ ಹಿಂಸಾಚಾರ ಪ್ರತಿಭಟನೆಗಳಿಂದಾಲಿ ಕಾಶ್ಮೀರದಲ್ಲಿ ಮುಚ್ಚಲಾಗಿದ್ದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಮತ್ತೆ ಸೋಮವಾರದಿಂದ ತನ್ನ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಆರಂಭ ಮಾಡಿವೆ.
ಈ ಕುರಿತಂತೆ ಅಧಿಕಾರಿಗಳ ಹೇಳಿಕೆಯನ್ನು ನೀಡಿದ್ದು, ಸುದೀರ್ಘ ಪ್ರತಿಭಟನೆಗಳಿಂದಾಗಿ ಮುಚ್ಚಲಾಗಿದ್ದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಇಂದಿನಿಂದ ಮತ್ತೆ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 12 ರಂದು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಕಾಲೇಜೊಂದಕ್ಕೆ ಪ್ರವೇಶ ಮಾಡಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗಳು ತೀವ್ರಗೊಂಡ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಿಸಲಾಗಿತ್ತು.
ಏಪ್ರಿಲ್ 12 ರಂದು ನಡೆದ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಭದ್ರತಾಪಡೆಗಳು ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿಯೊಬ್ಬರಿಗೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತಲ್ಲದೇ, ಭದ್ರತಾ ಪಡೆಗಳ ವಿರುದ್ಧ ಸಾಕಷ್ಟು ಟೀಕೆಗಳೂ ಕೂಡ ವ್ಯಕ್ತವಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


