ಅಲ್ಪಸಂಖ್ಯಾತರೂ ಸೇರಿ ಎಲ್ಲಾ ವರ್ಗದವರಿಗೂ ಎನ್ ಡಿಎ ಕೆಲಸ ಮಾಡಿದೆ: ಸಚಿವ ನಖ್ವಿ
ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

Published On :
ಗಾಜಿಯಾಬಾದ್: ಮೇ. ತಿಂಗಳಿಗೆ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಳ್ಳಲಿದೆ, ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಇಲಾಖೆಯ ರಾಜ್ಯ ಸಚಿವರಾಗಿರುವ ಮುಕ್ತಾರ್ ಅಬ್ಬಾಸ್ ನಖ್ವಿ, ಸಮಗ್ರ ಅಭಿವೃದ್ಧಿಯ ಸಿದ್ಧಾಂತದ ಬದ್ಧತೆಯನ್ನು ಮರೆಸಿ, ಅರಾಜಕತೆಯತ್ತ ಕೊಂಡೊಯ್ಯುವ ಯಾವುದೇ ಷಡ್ಯಂತ್ರಗಳಿಗೂ ಕೇಂದ್ರ ಹಾಗು ಉತ್ತರ ಪ್ರದೇಶ ಸರ್ಕಾರಗಳು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.
ಅಂತ್ಯೋದಯ ಕಾರ್ಯಕ್ರಮದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ದೊರೆಯುವಂತೆ ಕಳೆದ ಮೂರು ವರ್ಷಗಳಲ್ಲಿ ಮಾಡಿದ್ದೇವೆ. ಇದರಿಂದಾಗಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಾಯ ಆಗಿದೆ ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


