ಸುಕ್ಮಾ ದಾಳಿ: ತಮಿಳುನಾಡಿನ ನಾಲ್ವರು ಹುತಾತ್ಮ ಯೋಧರ ಕುಟುಂಬಕ್ಕೆ 20 ಲಕ್ಷ ಪರಿಹಾರ
ನಿನ್ನೆ ಛತ್ತೀಸ್ ಗಢದ ಸುಕ್ಮಾದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ರಾಜ್ಯದ ನಾಲ್ವರು ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ....

Published On :
ಚೆನ್ನೈ: ನಿನ್ನೆ ಛತ್ತೀಸ್ ಗಢದ ಸುಕ್ಮಾದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ರಾಜ್ಯದ ನಾಲ್ವರು ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಮಂಗಳವಾರ ತಲಾ 20 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.
ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಎಂ ಪದ್ಮನಾಬನ್, ಎನ್ ಸೆಂತಿಲ್ ಕುಮಾರ್, ಎನ್ ತಿರುಮುರುಗನ್ ಹಾಗೂ ಪಿ ಅಝಗುಪಾಂಡಿ ಅವರಿಗೆ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹುತಾತ್ಮ ನಾಲ್ವರು ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ತಲಾ 20 ಲಕ್ಷ ರುಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಮಿಳುನಾಡು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುTamil NaduSukma attackಸುಕ್ಮಾ ದಾಳಿRs 20 lakh to kin of 4 CRPF jawansಹುತಾತ್ಮ ಯೋಧರ ಕುಟುಂಬಕ್ಕೆ 20 ಲಕ್ಷ ಪರಿಹಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


