ಚುನಾವಣಾ ಆಯೋಗಕ್ಕೆ ಲಂಚ ಆರೋಪ: ದೆಹಲಿ ಪೊಲೀಸರಿಂದ ಟಿಟಿವಿ ದಿನಕರನ್ ಬಂಧನ
ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ...

Published On :
ನವದೆಹಲಿ: ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ,ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ಎಐಎಡಿಎಂಕೆ (ಅಮ್ಮ) ಪಕ್ಷದ ನಾಯಕ ಟಿಟಿವಿ ದಿನಕರನ್ ಅವರನ್ನು ಮಂಗಳವಾರ ಮಧ್ಯರಾತ್ರಿ ಅರೆಸ್ಟ್ ಮಾಡಿದ್ದಾರೆ.
ದಿನಕರನ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಆಪ್ತ ಮಲ್ಲಿಕಾರ್ಜುನ ಅವರನ್ನೂ ಸಹ ಬಂಧಿಸಲಾಗಿದೆ. ಬುಧವಾರ ಮಧ್ಯಾಹ್ನ ಬಂಧಿತರನ್ನು ಕೋರ್ಟ್ಗೆ ಹಾಜರು ಪಡಿಸಲಾಗುವುದು, ದೆಹಲಿ ಪೊಲೀಸರು ದಿನಕರನ್, ಸುಖೇಶ್ ಚಂದ್ರ ಶೇಖರ್ ನನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸಿ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿದರು. .
ದಿನಕರನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಎಏಐಎಡಿಎಂಕೆ(ಅಮ್ಮಾ) ವಕ್ತಾರ ಪುಗಳೇಂದಿ ಈ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಎಲ್ಲಾ ವ್ಯವಹಾರಗಳನ್ನು ದಿನಕರನ್ ನಿಷ್ಠೆಯಿಂದ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಅವರಿಗೆ ಜಾಮೀನು ಪಡೆಯಲು ನಾವು ಅಪೀಲು ಹೋಗುತ್ತೇವೆ ಎಂದು ಹೇಳಿದ್ದಾರೆ.
ಎಲ್ಲಾ ಆರೋಪಗಳು ದಿನಕರನ್ ವಿರುದ್ಧವೇ ಇವೆ. ಆತಕನ ವಿರುದ್ಧ ಏಕೆ ಯಾವ ಕ್ರಮಗಳನ್ನು ಜರುಗಿಸಿಲ್ಲ ಎಂದು ನ್ಯಾಯಾಧೀಶ ಪೂನಂ ಚೌಧುರಿ ದೆಹಲಿ ಕ್ರೈಂ ಬ್ರಾಂಚ್ ನ ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಸುಖೇಶ್ ಚಂದ್ರಶೇಖರ್ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ArrestDelhi Policeದೆಹಲಿ ಪೊಲೀಸ್ಬಂಧನಟಿಟಿವಿ ದಿನಕರನ್TTV DhinakaranElection Commission bribery caseಚುನಾವಣಾ ಆಯೋಗಕ್ಕೆ ಲಂಚ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


