ನಾನು ಸ್ವಯಂಪ್ರೇರಣೆಯಿಂದ ರೈಲ್ವೆ ಬಜೆಟ್ ಬಿಟ್ಟುಕೊಟ್ಟಿದ್ದೇನೆ: ಸುರೇಶ್ ಪ್ರಭು
ರೈಲ್ವೆ ಬಜೆಟ್ ಅನ್ನು ನಾನೇ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದೇನೆ. ಹಣಕಾಸು ಸಚಿವಾಲಯ ರೈಲ್ವೆ ಬಜೆಟ್ ಅನ್ನು....

Published On :
ನವದೆಹಲಿ: ರೈಲ್ವೆ ಬಜೆಟ್ ಅನ್ನು ನಾನೇ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದೇನೆ. ಹಣಕಾಸು ಸಚಿವಾಲಯ ರೈಲ್ವೆ ಬಜೆಟ್ ಅನ್ನು ಕಿತ್ತುಕೊಂಡಿಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬುಧವಾರ ಹೇಳಿದ್ದಾರೆ.
ಈ ಬಾರಿ ಶತಮಾನದಷ್ಟು ಹಳೆಯದಾದ ರೈಲ್ವೆ ಬಜೆಟ್ ಗೆ ಗುಡ್ ಬೈ ಹೇಳಿ ಫೆಬ್ರವರಿ 1ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲಾಗಿದೆ.
ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ನಡೆದ ಸಂವಾದದ ವೇಳೆ ರೈಲ್ವೆ ಬಜೆಟ್ ವಿಲೀನದ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್ ಪ್ರಭು ಅವರು, ಸ್ವತಃ ನಾನೇ ರೈಲ್ವೆ ಬಜೆಟ್ ಅನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಿದ್ದೇನೆ. ಹಣಕಾಸು ಸಚಿವಾಲಯ ವಿಲೀನ ಮಾಡಿಲ್ಲ ಎಂದರು.
1924ರಿಂದ ಸಂಸತ್ತಿನಲ್ಲಿ ರೈಲ್ವೆ ಬಜೆಟ್ ಅನ್ನು ಪ್ರತ್ಯೆಕವಾಗಿ ಮಂಡಿಸಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


