ದೆಹಲಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಿಯಾಗಿ ಪ್ರಚಾರ ನಡೆಸಿಲ್ಲ: ಶೀಲಾ ದೀಕ್ಷಿತ್
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ, ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಆಕ್ರಮಣಕಾರಿಯಾದ ರೀತಿಯಲ್ಲಿ ..

Published On :
ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಆಕ್ರಮಣಕಾರಿಯಾದ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರ ಶೈಲಿಗೆ ಅಸಮಾಧಾನ ವ್ಯಕ್ತ ಪಜಡಿಸಿರುವ ಅವರು, ಪ್ರಚಾರಕ್ಕೆ ನನ್ನನ್ನು ಆಹ್ವಾನಿಸಿಲ್ಲ ಎಂಗದು ಬೇಸರ ವ್ಯಕ್ತ ಪಡಿಸಿದ್ದಾರೆ.
ಇವಿಎಂ ಯಂತ್ರಗಳ ಬಗ್ಗೆ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಬಗ್ಗೆ ಸೋತವರು ಹಾಗೂ ಗೆದ್ದವರು ಬೇರೆ ಬೇರೆ ರೀತಿಯ ದೃಷ್ಠಿಕೋನದಿಂದ ಮಾತನಾಡುತ್ತಾರೆ, ಒಂದು ವೇಳೆ ಆ ರೀತಿಯ ಸಮಸ್ಯೆ ಇದ್ದರೇ ಚುನಾವಣಾ ಆಯೋಗ ಮತ್ತು ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು ಎಂದು ಹೇಳಿದ್ದಾರೆ.
ಹಿರಿಯ ಪಕ್ಷವಾದ ಕಾಂಗ್ರೆಸ್ ಕೆಟ್ಟ ಹಂತಕ್ಕೆ ಬಂದು ತಲುಪಿದೆ, ಆದರೆ ಮತ್ತೆ ತನ್ನ ಕಾಂಗ್ರೆಸ್ ತನ್ನ ಸ್ಥಾನಮಾನವನ್ನು ವಾಪಸ್ ಗಳಿಸಿಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್campaignಚುನಾವಣಾ ಪ್ರಚಾರSheila Dikshitಶೀಲಾ ದೀಕ್ಷಿತ್ದೆಹಲಿ ಮಹಾನಗರ ಪಾಲಿಕೆ ಚುನಾವಣೆDelhi Municipal elections
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


