ಯೋಗಿ ಆದಿತ್ಯನಾಥ್ ರನ್ನು ಹೊಗಳಿದ ಮನೀಷ್ ಸಿಸೋಡಿಯಾ!
ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದು, ಉತ್ತರ ಪ್ರದೇಶ ಮಾದರಿ...

Published On :
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದು, ಉತ್ತರ ಪ್ರದೇಶದ ಮಾದರಿಯಲ್ಲೇ ಮಹಾತ್ಮರ ಜನ್ಮದಿನಾಚರಣೆಗೆ ನೀಡಲಾಗುವ ರಜೆ ರದ್ದು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಉತ್ತರ ಪ್ರದೇಶದಿಂದ ಪ್ರೇರಣೆಗೊಂಡಿದ್ದು, ಮಹಾತ್ಮರ ಜನ್ಮ ದಿನಾಚರಣೆಯ ದಿನದಂದು ಶಾಲಾ ಕಾಲೇಜುಗಳಿಗೆ ರಜೆ ನೀಡದೇ ಇರುವ ತೀರ್ಮಾನ ಕೈಗೊಳ್ಳಲಾಗಿದೆ. ರಜೆ ರದ್ದುಗೊಳಿಸುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಈ ವಿಷಯದಲ್ಲಿ ಉತ್ತಮ ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳ ಒಳ್ಳೆಯ ನಿರ್ಧಾರಗಳಿಂದ ಕಲಿಯಲು ನಾವು ಸದಾ ಸಿದ್ಧರಿರಬೇಕು ಎಂದು ಸಿಸೋಡಿಯಾ ಟ್ವೀಟ್ ನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೆಹಲಿDelhiYogi Adityanathಯೋಗಿ ಆದಿತ್ಯನಾಥ್holidaysDeputy Chief Minister Manish Sisodiaಡಿಸಿಎಂ ಮನೀಷ್ ಸಿಸೋಡಿಯಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


