ಮಹಾನ್ ಮಾನವತಾವಾದಿ ಬಸವಣ್ಣ ಜಯಂತಿ ಆಚರಣೆಗೆ ಪ್ರಧಾನಿ ಮೋದಿ ಚಾಲನೆ
ದಯವೇ ಧರ್ಮದ ಮೂಲವಯ್ಯಾ ಎಂದು ನುಡಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗಿದೆ...

Published On :
ನವದೆಹಲಿ: ದಯವೇ ಧರ್ಮದ ಮೂಲವಯ್ಯಾ ಎಂದು ನುಡಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಬಸವ ಜಯಂತಿ ಆಚರಣೆ ಹಿನ್ನೆಲೆ ಸುವರ್ಣ ಮಹೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಅನುಭವ ಮಂಟಪದ ಮೂಲಕ ಸಮಾನತೆ ಸಾರಿದ ಶರಣ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗುತ್ತಿದೆ.
ಇದೇ ವೇಳೆ ಬಸವಣ್ಣ ಸೇರಿದಂತೆ 173 ಶರಣರ ವಚನಗಳು 23 ಭಾಷೆಗಳಿಗೆ ಅನುವಾದಗೊಂಡಿದ್ದು ಈ ಪುಸ್ತಕವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ಇದರಲ್ಲಿ ಸರಿಸುಮಾರು 2500 ವಚನಗಳು 23 ಭಾಷೆಗಳಿಗೆ ಅನುವಾದಗೊಂಡಿವೆ.
ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಬಸವ ಜಯಂತಿ ಆಚರಣೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


