ದೇಶ

ಶಿಕ್ಷಕರ ಅರ್ಹತಾ ಪರೀಕ್ಷೆ ವರ್ಷಕ್ಕೆ ಒಂದೇ ಸಲ ನಡೆಸಲು ಸಿಬಿಎಸ್ ಇ ಒಲವು

ಒಂದನೇ ತರಗತಿಯಿಂದ 8ನೇ ತರಗತಿಯವರೆಗಿನ ಶಿಕ್ಷಕರ ನೇಮಕಕ್ಕೆ ನಡೆಸುವ ಅರ್ಹತಾ ಪರೀಕ್ಷೆಯನ್ನು...

ಶಿಕ್ಷಕರ ಅರ್ಹತಾ ಪರೀಕ್ಷೆ ವರ್ಷಕ್ಕೆ ಒಂದೇ ಸಲ ನಡೆಸಲು ಸಿಬಿಎಸ್ ಇ ಒಲವು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಒಂದನೇ ತರಗತಿಯಿಂದ 8ನೇ ತರಗತಿಯವರೆಗಿನ ಶಿಕ್ಷಕರ ನೇಮಕಕ್ಕೆ ನಡೆಸುವ ಅರ್ಹತಾ ಪರೀಕ್ಷೆಯನ್ನು ಇನ್ನು ಮುಂದೆ ವರ್ಷಕ್ಕೆ ಎರಡು ಸಲ ಬದಲು ಒಂದು ಸಲ ನಡೆಸುವ ಪ್ರಸ್ತಾವನೆಯಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ತಿಳಿಸಿದೆ. 
ಜೆಇಇ-ಮುಖ್ಯ ಪರೀಕ್ಷೆ ಮತ್ತು ವೃತ್ತಿಪರ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆ ನಡೆಸಬೇಕಾಗುವುದರಿಂದ ಮಂಡಳಿಗೆ ತೀವ್ರ ಹೊರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವರ್ಷಕ್ಕೆ ಒಂದೇ ಸಾರಿ ನಡೆಸಬೇಕೆಂದು ಸಿಬಿಎಸ್ ಇ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಮನವರಿಕೆ ಮಾಡಿದೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸುವುದನ್ನು ನಿಲ್ಲಿಸಬೇಕೆಂದು ಮಂಡಳಿ ಇತ್ತೀಚೆಗೆ ಶಿಫಾರಸು ಮಾಡಿತ್ತು. ಎಲ್ಲಾ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳು ವರ್ಷಕ್ಕೆ ಒಂದೇ ಬಾರಿ ನಡೆಯುವಾಗ ನೆಟ್ ಪರೀಕ್ಷೆಯನ್ನು ಏಕೆ ಎರಡು ಬಾರಿ ನಡೆಸಬೇಕೆಂದು ಅದು ಪ್ರಶ್ನಿಸಿತ್ತು. 
ಆದರೆ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.