ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನ ನೀಡಲು ಆಗ್ರಹ
ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ನೀಡಬೇಕೆಂದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On :
ನವದೆಹಲಿ: ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ನೀಡಬೇಕೆಂದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನ್ಯಾಯಾಲಯಗಳು ಪ್ರಕರಣಗಳನ್ನು ವಜಾಗೊಳಿಸಿದರೂ ಸಹ ಪ್ರಕರಣಗಳನ್ನು ಸ್ವತಂಟ್ರವಾಗಿ ನಿರ್ವಹಿಸುವ ಸ್ಥಾನಮಾನ ನೀಡಬೇಕೆಂಬುದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಅವರ ಮುಖ್ಯ ಬೇಡಿಕೆಯಾಗಿದೆ. ಇಡಿ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಲ್ ಸಿಂಗ್, ಜಾರಿ ನಿರ್ದೇಶನಾಲಯ ಸತತವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ, ಅದು ಬದಲಾಗಬೇಕಿದ್ದು, ಸಂಸ್ಥೆಗೆ ಸ್ವಾಯತ್ತತೆ ನೀಡಬೇಕಿದೆ ಎಂದು ಮನವಿ ಮಾಡಿದ್ದಾರೆ.
ನ್ಯಾಯಾಲಯಗಳು ವಜಾಗೊಳಿಸಿದರೂ ಸಹ ಇಡಿ ದಾಖಲಿಸಿದ್ದ ಪ್ರಕರಣಗಳು ವ್ಯರ್ಥವಾಗುತ್ತವೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತತೆ ನೀಡಬೇಕಾದ ಅಗತ್ಯವಿದೆ ಎಂದು ಕರ್ನಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


