ಪ್ರತ್ಯೇಕತಾವಾದಿಗಳು ಕಾಶ್ಮೀರಿಗಳನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ, ಮಾತುಕತೆ ಇಲ್ಲ: ರಾಮ್ ಮಾಧವ್
ಕಾಶ್ಮೀರಿ ಪ್ರತ್ಯೇಕತಾವಾದಿಗಳು ಕಾಶ್ಮೀರದ ಜನತೆಯನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ಹೇಳಿದ್ದಾರೆ.

Published On :
ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿಗಳು ಕಾಶ್ಮೀರದ ಜನತೆಯನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ಹೇಳಿದ್ದಾರೆ.
ಫೇಸ್ ಬುಕ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾಮ್ ಮಾಧವ್, ಕಾಶ್ಮೀರದ ಪ್ರತ್ಯೇಕತಾವಾದಿಗಳು ಹಾಗೂ ಆಜಾದಿ ಬಯಸುವವರೊಂದಿಗೆ ಕಾಶ್ಮೀರದ ಅಸ್ಥಿರತೆ ಕುರಿತು ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಸಹ ಕಲ್ಲುತೂರಾಟ ಮಾಡುವವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಯುವುದು ನಿಂತರೆ, ಪೆಲ್ಲೆಟ್ ಗನ್ ಗಳ ಬಳಕೆಯನ್ನೂ ಸ್ಥಗಿತಗೊಳಿಸಲು ಭದ್ರತಾ ಪಡೆ ಹಾಗೂ ಪೊಲೀಸರಿಗೆ ಸೂಚನೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
ಭದ್ರತಾಪಡೆಗಳಿಗೆ ಸಂಯಮದಿಂದ ಇರಲು ತರಬೇತಿ ನೀಡಿ, ಗಲಭೆಗಳನ್ನು ನಿಯಂತ್ರಿಸುವುದಕ್ಕೆ ಬೇರೆ ಮಾರ್ಗಗಳನ್ನು ಕಂಡುಕೊಳ್ಳುವಂತೆ ಸೂಚನೆ ನೀಡಲಾಗಿರುತ್ತದೆ. ಭಯೋತ್ಪಾದಕರನ್ನು ನಿರ್ನಾಮ ಮಾಡುವ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿರಬೇಕಾಗುತ್ತದೆ ಹಾಗೂ ಸ್ಪಷ್ಟವಾಗಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


