ದೇಶ

ಬಿಹಾರದಲ್ಲಿ ಗೂಡ್ಸ್ ರೈಲು ದುರಂತ: 8 ಮಂದಿಯ ದಾರುಣ ಸಾವು

ಬಿಹಾರದಲ್ಲಿ ಶನಿವಾರ ತಡರಾತ್ರಿ ನಡೆದ ಗೂಡ್ಸ್ ರೈಲು ದುರಂತದಲ್ಲಿ 8 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರದಲ್ಲಿ ಗೂಡ್ಸ್ ರೈಲು ದುರಂತ: 8 ಮಂದಿಯ ದಾರುಣ ಸಾವು
ಸಾಂದರ್ಭಿಕ ಚಿತ್ರ
Published On :

ಪಾಟ್ನಾ: ಬಿಹಾರದಲ್ಲಿ ಶನಿವಾರ ತಡರಾತ್ರಿ ನಡೆದ ಗೂಡ್ಸ್ ರೈಲು ದುರಂತದಲ್ಲಿ 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರದ ಶೇಖ್ ಪುರ ಜಿಲ್ಲೆಯ ಸೆರಾರಿ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಹಳಿ ದಾಟುತ್ತಿದ್ದ ವೇಳೆ ರೈಲು ವೇಗವಾಗಿ ಬಂದು ಗುದ್ದಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರು ಆಸ್ಪತ್ರೆಗೆ  ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಅಂತೆಯೇ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಶೇಖ್ ಪುರ ಸದಾರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ  ಮೃತರನ್ನು ಇನ್ನಷ್ಟೇ ಗುರುತು ಹಿಡಿಯಬೇಕಿದೆ.

ಮೂಲಗಳ ಪ್ರಕಾರ ಸ್ಥಳೀಯ ಮಾರುಕಟ್ಟೆಗೆ ತೆರಳಿದ್ದ ಜನರ ಗುಂಪು ರೈಲ್ವೇ ಹಳಿ ದಾಟುತ್ತಿದ್ದಾಗ ಅದೇ ಸಂದರ್ಭದಲ್ಲಿ ಬಂದ ಗೂಡ್ಸ್ ರೈಲು ಜನರಿಗೆ ಢಿಕ್ಕಿ ಹೊಡೆದಿದೆ. ಹಳಿ ಮೇಲೆ ಮಂಜು ಕವಿದಿದ್ದ ಪರಿಣಾಮ ರೈಲನ್ನು ನೋಡದ  ಜನರು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದಿದೆ. ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂತೆಯೇ ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ  ಗಾಯಗೊಂಡಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.