ದೇಶ

ಉ.ಪ್ರ ಸ್ಥಳೀಯ ಸಂಸ್ಥೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್

ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ...

ಉ.ಪ್ರ ಸ್ಥಳೀಯ ಸಂಸ್ಥೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ
Published On :
ನವದೆಹಲಿ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿತ್ತು. 
ಈ ಬಗ್ಗೆ ಸುದ್ದಿಯನ್ನು ಖಚಿತಪಡಿಸಿದ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪಕ್ಷದ ನಾಯಕರು ಮತ್ತು ಸ್ಥಳೀಯ ಕಾರ್ಯಕರ್ತರ ಸಲಹೆಗಳನ್ನು ಪಡೆದು ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದೇವೆ ಎಂದರು. 
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 403 ಸೀಟುಗಳಲ್ಲಿ 324 ಸೀಟುಗಳನ್ನು ಗೆದ್ದು ಸರ್ಕಾರ ರಚಿಸಿದೆ. ಸಮಾಜವಾದಿ ಪಕ್ಷವನ್ನು ಕೂಡ ಧೂಳೀಪಟ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.