ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಮನೆ ಮೇಲೆ ದಾಳಿ: 4 ಬಂಧನ
ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರ ಮನೆ ಮೇಲೆ ದುಷ್ಕರ್ಮಿಗಳು ಗುಂಪೊಂದು ದಾಳಿ ಮಾಡಿರುವುದಾಗಿ ಸೋಮವಾರ ತಿಳಿದುಬಂದಿದೆ...

Published On :
ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರ ಮನೆ ಮೇಲೆ ದುಷ್ಕರ್ಮಿಗಳು ಗುಂಪೊಂದು ದಾಳಿ ಮಾಡಿರುವುದಾಗಿ ಸೋಮವಾರ ತಿಳಿದುಬಂದಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆ ನಡೆದಾಗ ತಿವಾರಿಯವರು ಮನೆಯಲ್ಲಿರಲಿಲ್ಲ. ಮಧ್ಯರಾತ್ರಿ ಇದ್ದಕ್ಕಿದ್ದಂತೆ ತಿವಾರಿಯವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ದಿದ್ದ ಸಿಬ್ಬಂದಿಗಳು ಹಾಗೂ ಕೆಲ ನಾಯಕರ ಮೇಲೆ ದಾಳಿ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಘಟನೆ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೃಶ್ಯಾವಳಿಗಳಲ್ಲಿರುವ ಪ್ರಕಾರ, ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ ದುಷ್ಕರ್ಮಿಗಳೊಂದಿಗೆ ಮನೆಯ ಸಿಬ್ಬಂದಿಗಳು ಮಾತಿನ ಚಕಾಮಕಿ ನಡೆಸಿದ್ದಾರೆ. ನಂತರ ದುಷ್ಕರ್ಮಿಗಳು ದಾಳಇ ಮಾಡಿರುವುದು ಬಂದಿದೆ.
ಘಟನೆ ಸಂಬಂಧ ಈಗಾಗಲೇ ಪ್ರಕಱಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಿವಾರಿಯವರು, ಇದು ನಿಜಕ್ಕೂ ದೊಡ್ಡ ಬೆದರಿಕೆಯಾಗಿದೆ. ನನ್ನ ಮೇಲೆ ದಾಳಿ ಮಾಡಿದಂತಾಗಿದೆ. ದಾಳಿಯಲ್ಲಿ ನಮ್ಮ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅವರ ಉದ್ದೇಶಗಳು ನಿಜಕ್ಕೂ ಭಯಂಕರವಾಗಿದೆ. ಇದರ ಹಿಂದೆ ದೊಡ್ಡ ಪಿತೂರಿಯೇ ಆಡಗಿದೆ. ಇದರಲ್ಲಿ ಪೊಲೀಸರು ಕೂಡ ಭಾಗಿಯಾಗಿರುವುದ ಶಂಕೆಗಳಿವೆ. ಪ್ರಕರಣ ಸಂಬಂಧ ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ್ನು ನೋಡಿದರೆ, ಸ್ಥಳದಲ್ಲಿ ಪೊಲೀಸ್ ಪೇದೆ ಇರುವುದು ಕಂಡು ಬಂದಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ ದುಷ್ಕರ್ಮಿಗಳು ನನಗಾಗಿಯೇ ಮನೆಗೆ ನುಗ್ಗಿದ್ದಾರೆ. ದಾಳಿ ಕುರಿತಂತೆ ನನಗೆ ಯಾವುದೇ ರೀತಿಯ ಮಾಹಿತಿ ಇರಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


