ದೇಶ

ಲಂಚ ಪ್ರಕರಣ: ಮೇ 15ರವರೆಗೆ ದಿನಕರನ್, ಮಲ್ಲಿಕಾರ್ಜುನ್ ಗೆ ನ್ಯಾಯಾಂಗ ಬಂಧನ

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಮಾಜಿ ಮುಖಂಡ ಹಾಗೂ ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ

ಲಂಚ ಪ್ರಕರಣ: ಮೇ 15ರವರೆಗೆ ದಿನಕರನ್, ಮಲ್ಲಿಕಾರ್ಜುನ್ ಗೆ ನ್ಯಾಯಾಂಗ ಬಂಧನ
ಸಂಗ್ರಹ ಚಿತ್ರ
Published On :

ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಮಾಜಿ ಮುಖಂಡ ಹಾಗೂ ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು 15 ದಿನಗಳ  ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ದಿನಕರನ್ ಹಾಗೂ ಮಲ್ಲಿಕಾರ್ಜನ್ ಅವರನ್ನು ಇಂದು ವಿಶೇಷ  ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ಪೂನಂ ಚೌದರಿ ಅವರು ದಿನಕರನ್ ಹಾಗೂ ಅವರ ಬೆಂಬಲಿಗ ಮಲ್ಲಿಕಾರ್ಜುನ್ ಅವರನ್ನು 15 ದಿನಗಳ ನ್ಯಾಯಾಂಗ  ಬಂಧನಕ್ಕೆ ನೀಡಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ದಿನಕರನ್ ಹಾಗೂ ಮಲ್ಲಿಕಾರ್ಜುನ್ ಅವರ ವಿಚಾರಣೆ ಪ್ರಸ್ತುತ ಅಗತ್ಯವಿಲ್ಲ. ಪ್ರಸ್ತುತ ತಮಗೆ ದೊರೆತಿರುವ ಸಾಕ್ಷ್ಯಾಧಾರಗಳ ಪರಿಶೀಲನೆ ಹಾಗೂ ಸಾಕ್ಷಿಗಳ ವಿಚಾರಣೆ  ನಡೆಯಬೇಕಿದೆ ಎಂದು ಹೇಳಿದ್ದರಿಂದ ಇಬ್ಬರೂ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.