ದೇಶ

ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪಿಸುತ್ತೇವೆ: ಮೆಹಬೂಬಾ ಮುಫ್ತಿ

ಪ್ರತ್ಯೇಕತಾವಾದಿಗಳ ಜೊತೆಗಿನ ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣನ್ನು ಮರುಸ್ಥಾಪಿಸುತ್ತೇವೆಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿದ್ದಾರೆ...

ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪಿಸುತ್ತೇವೆ: ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
Published On :
ಶ್ರೀನಗರ: ಪ್ರತ್ಯೇಕತಾವಾದಿಗಳ ಜೊತೆಗಿನ ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣನ್ನು ಮರುಸ್ಥಾಪಿಸುತ್ತೇವೆಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿದ್ದಾರೆ. 
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಅವರ ಜೊತೆಗಿನ ಭೇಟಿ ಬಳಿಕ ಮಾತನಾಡಿರುವ ಅವರು, 2-3 ತಿಂಗಳುಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಾದ ಬದಲಾವಣೆಗಳನ್ನು ನೋಡಬಹುದು. ಮುಂದಿನ ಕೆಲ ತಿಂಗಳು ನಮಗೆ ನಿಜಕ್ಕೂ ನಿರ್ಣಾಯಕ ಸಮಯವಾಗಲಿದೆ ಎಂದು ಹೇಳಿದ್ದಾರೆ. 
ಕಾಶ್ಮೀರ ಸಮಸ್ಯೆ 70 ವರ್ಷಗಳಿಂದಲೂ ಇದ್ದು, ಸಮಸ್ಯೆ ಕುರಿತಂತೆ ಪ್ರತ್ಯೇಕತಾವಾದಿಗಳ ಜೊತೆಗೆ ಮಾತುಕತೆ ನಡೆಸುವುದಕ್ಕೂ ಮುನ್ನ ಕಾಶ್ಮೀರದಲ್ಲಿ ಮೊದಲೂ ಶಾಂತಿಯುತ ವಾತಾವರಣನ್ನು ಮರುಸ್ಥಾಪನೆ ಮಾಡುತ್ತೇವೆ. 
ವಾಜಪೇಯಿಯವರ ನೀತಿಗಳನ್ನು ಅನುಸರಣೆ ಮಾಡಲೇಬೇಕಿದೆ. ವಾಜಪೇಯಿ ನಡೆಯನ್ನು ಅನುಸರಿಸುವಂತೆ ಮೋದಿಯವರು ಹಲವು ಬಾರಿ ಹೇಳಿದ್ದಾರೆ. ಭ್ರಮಯಲ್ಲಿರುವ ಯುವಕರ ಮನಸ್ಥಿತಿಗಳನ್ನು ಬದಲಾವಣೆ ಮಾಡಬೇಕಿದ್ದು, ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ ಮಾಡಲು ಕೇಂದ್ರ ಮುಂದಾಗಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.