ಉಪರಾಷ್ಟ್ರಪತಿ ಚುನಾವಣೆ: ಗೋಪಾಲಕೃಷ್ಣ ಗಾಂಧಿಗೆ ಆಪ್ ಬೆಂಬಲ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

Published On :
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.
ಚುನಾವಣೆ ಬಗ್ಗೆ ಮಾತನಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮ್ಮ ಪಕ್ಷ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದನ್ನು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮುನ್ನ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಮಾತುಕತೆಯ ನಂತರ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಆ.5 ಕ್ಕೆ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ನಾಲ್ವರು ಸಂಸದರನ್ನು ಹೊಂದಿದ್ದು, ಈ ಪೈಕಿ ಇಬ್ಬರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


