ದೇಶ

ಕರ್ನಾಟಕದ ಐಟಿ ದಾಳಿಗೂ ಗುಜರಾತ್ ಚುನಾವಣೆಗೂ ನಂಟು ಕಲ್ಪಿಸಬೇಡಿ: ಜೇಟ್ಲಿ

ಕರ್ನಾಟಕದಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಸಂಸತ್ ನಲ್ಲಿ ಚರ್ಚೆಯಾಗಿದೆ.

ಕರ್ನಾಟಕದ ಐಟಿ ದಾಳಿಗೂ ಗುಜರಾತ್ ಚುನಾವಣೆಗೂ ನಂಟು ಕಲ್ಪಿಸಬೇಡಿ: ಜೇಟ್ಲಿ
ಅರುಣ್ ಜೇಟ್ಲಿ
Published On :
ನವದೆಹಲಿ: ಕರ್ನಾಟಕದಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಸಂಸತ್ ನಲ್ಲಿ ಚರ್ಚೆಯಾಗಿದೆ. 
ರಾಜ್ಯಸಭೆಯಲ್ಲಿ ಕಾಂಗ್ರೆಸ್ ನ ನಾಯಕರಾದ ಗುಲಾಂ ನಬಿ ಆಜಾದ್ ಹಾಗೂ ಆನಂದ್ ಶರ್ಮಾ ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಆರೋಪ ಮಾಡಿದ್ದರೆ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ವಿರುದ್ಧ ಆರೋಪ ಮಾಡಿದ್ದು, ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ಬೆದರಿಸಲು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. 
ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಗುಜರಾತ್ ರಾಜ್ಯಸಭಾ ಚುನಾವಣೆಗೂ ಐಟಿ ದಾಳಿಗೂ ಸಂಬಂಧ ಕಲ್ಪಿಸಬೇಡಿ, ಆದಾಯ ತೆರಿಗೆ ಆರ್ಥಿಕ ಅಪರಾಧಕ್ಕೆ ಸಂಬಂಧಪಟ್ಟ ವಿಷಯ ಎಂದು ಜೇಟ್ಲಿ ಹೇಳಿದ್ದಾರೆ.  
ಐಟಿ ಅಧಿಕಾರಿಗಳು ಕರ್ನಾಟಕದ ಸಚಿವರು ಹಾಗೂ ಅವರಿಗೆ ಸಂಬಂಧಪಟ್ಟವರ ನಿವಾಸದ ಮೇಲೆ ದಾಳಿ ನಡೆಸಿದ್ದು ಒಟ್ಟು 39 ಸ್ಥಳಗಳಲ್ಲಿ ದಾಳಿ ನಡೆದಿದೆ. ಶೋಧಕಾರ್ಯ ನಡೆದಾಗ ವ್ಯಕ್ತಿಯ ಹೇಳಿಕೆ ಪಡೆಯುವುದು ಸಹಜ, ಇದಕ್ಕಾಗಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಪಡೆಯಲು ಅಧಿಕಾರಿಗಳು ರೆಸಾರ್ಟ್ ಗೆ ಹೋದಾಗ ಅಲ್ಲಿ ಡಿಕೆ ಶಿವಕುಮಾರ್ ದಾಖಲೆಗಳನ್ನು ಹರಿಯುತ್ತಿದ್ದರು, ಹರಿಯುತ್ತಿದ್ದ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.