ಪಣಜಿ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಗೋವಾ ಸಿಎಂ ಪರಿಕ್ಕರ್
ಆಗಸ್ಟ್. 23 ರಿಂದ ಉಪ ಚುನಾವಣೆ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪಣಜಿ ಕ್ಷೇತ್ರದ ಅಭ್ಯರ್ಥಿಯಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ...

Published On :
ಪಣಜಿ: ಆಗಸ್ಟ್. 23 ರಿಂದ ಉಪ ಚುನಾವಣೆ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪಣಜಿ ಕ್ಷೇತ್ರದ ಅಭ್ಯರ್ಥಿಯಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ...
ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ ಮಹಾಲಕ್ಷ್ಮಿ ದೇಗುಲಕ್ಕೆ ಭೇಡಿ ನೀಡದ ಪರಿಕ್ಕರ್ ಅವರು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಾಪತ್ರ ಸಲ್ಲಿಕೆ ಮಾಡಿದ್ದಾರೆಂದು ತಿಳಿದುಬಂದಿದೆ.
ಪರಿಕ್ಕರ್ ಅವರು 1994ರಿಂದ ಸತತ ಐದು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 2015ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಪರಿಕ್ಕರ್ ಅವರಿಗೆ ರಕ್ಷಣಾ ಸಚಿವನ ಸ್ಥಾನ ನೀಡಿದ ಬಳಿದ ಬಳಿ ರಾಜಿನಾಮೆಯನ್ನು ಸಲ್ಲಿಸಿದ್ದರು.
ವಿವಿಧ ರಾಜ್ಯಗಳಲ್ಲಿ ತೆರವಾಗಿದ್ದ 4 ವಿಧಾಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಕೆಲ ದಿನಗಳ ಹಿಂದಷ್ಟೇ ಚುನಾವಣಾ ದಿನಾಂಕ ಪ್ರಕಟಿಸಿತ್ತು. ಪರಿಕ್ಕರ್ ಅವರು ಸ್ಪರ್ಧಿಸಲಿರುವ ಪಣಜಿ, ವಲ್ಪೋಯಿ, ದೆಹಲಿಯ ಬವನ ಹಾಗೂ ಆಂಧ್ರಪ್ರದೇಶದ ನಂದ್ಯಾಲ್ ವಿಧಾನಸಭಾ ಕ್ಷೇತ್ರಗಳಿಗೆ ಆಗಸ್ಟ್ 23ರಂದು ಚುನಾವಣೆ ನಡೆಯಲಿದೆ.
ಈ ನಾಲ್ಕು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು. ಆಗಸ್ಟ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 28ರಂದು ಮತ ಎಣಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


