ದೇಶ

ಡಿಕೆಶಿ ಮೇಲೆ ಐಟಿ ದಾಳಿ ವಿರುದ್ಧ ಹೋರಾಟ ಮಾಡಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚನೆ

ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿರುವುದರ ವಿರುದ್ಧ ಹೋರಾಟ ನಡೆಸುವಂತೆ...

ಡಿಕೆಶಿ ಮೇಲೆ ಐಟಿ ದಾಳಿ ವಿರುದ್ಧ ಹೋರಾಟ ಮಾಡಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚನೆ
ರಾಹುಲ್ ಗಾಂಧಿ
Published On :
ನವದೆಹಲಿ: ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿರುವುದರ ವಿರುದ್ಧ ಹೋರಾಟ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 
ಸಿದ್ದರಾಮಯ್ಯನವರಿಗೆ ದೂರವಾಣಿ ಕರೆ ಮಾಡಿರುವ ರಾಹುಲ್ ಗಾಂಧಿ ಅವರು ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದು ಈ ವೇಳೆ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಆಗ ರಾಹುಲ್ ಗಾಂಧಿ ಅವರು ಈ ಐಟಿ ದಾಳಿ ವಿರುದ್ಧ ಪ್ರತಿಭಟನೆ ಮತ್ತು ಹೋರಾಟ ನಡೆಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿರುವುದು ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ರಾಜ್ಯಸಭೆ ಕಲಾಪದಲ್ಲಿ ರಾಜ್ಯಸಭೆಯ ಕಾಂಗ್ರೆಸ್ ನ ನಾಯಕರು ಡಿಕೆ ಶಿವಕುಮಾರ್ ನಿವಾಸ, ಕಚೇರಿಯ ಮೇಲೆ ಐಟಿ ದಾಳಿ ನಡೆಸಿರುವ ಪ್ರಕರಣವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, " ನಾವು ಹಣ ಹಂಚುತ್ತಿಲ್ಲ, ಆದರೂ ನಮ್ಮ ಮೇಲೆ ದಾಳಿ ನಡೆಸಲಾಗುತ್ತಿದೆ: ಹಣ ಹಂಚುತ್ತಿರುವ ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ನಡೆಯಲಿ" ಎಂದು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದ್ದಾರೆ. 
ಗುಜರಾತ್ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬೆದರಿಸಲು ಐಟಿ ದಾಳಿ ನಡೆಸಲಾಗಿದೆ. ಹಣ ಹಂಚುತ್ತಿರುವವರು ನಾವಲ್ಲ, ಬಿಜೆಪಿಯವರು ಎಂದು ಕಾಂಗ್ರೆಸ್ ಸಂಸದರು ಘೋಷಣೆ ಕೂಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.