ನಿತೀಶ್ ನಿರ್ಧಾರದಿಂದ ಬೇಸರ, ಶೀಘ್ರದಲ್ಲೇ ಶರದ್ ಯಾದವ್ ರಿಂದ ಹೊಸ ಪಕ್ಷ ರಚನೆ
ಬಿಹಾರದಲ್ಲಿ ಮಹಾಮೈತ್ರಿ ಮುರಿದು ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ....

Published On :
ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿ ಮುರಿದು ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಜೆಡಿಯು ನಾಯಕ ಶದರ್ ಯಾದವ್ ಅವರು ಶೀಘ್ರದಲ್ಲೇ ಹೊಸ ರಾಜಕೀಯ ಪಕ್ಷ ಕಟ್ಟಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 18.ಕಾಮ್ ವರದಿ ಪ್ರಕಾರ, ತಮ್ಮೊಂದಿಗೆ ಚರ್ಚಿಸದೇ ಬಿಜೆಪಿಯೊಂದಿಗೆ ಮತ್ತೆ ಕೈಜೋಡಿಸಿರುವ ನಿತೀಶ್ ಕುಮಾರ್ ನಿರ್ಧಾರದಿಂದ ತೀವ್ರ ಬೇಸರಗೊಂಡಿರುವ ಶರದ್ ಯಾದವ್ ಅವರು ಹೊಸ ಪಕ್ಷ ರಚನೆ ಬಗ್ಗೆ ಚಿಂತನೆ ನಡೆಸಿದ್ದಾರೆ.
ಶರದ್ ಯಾದವ್ ಅವರು ನೂತನ ರಾಜಕೀಯ ಪಕ್ಷ ರಚನೆ ಮಾಡಿ ಕಾಂಗ್ರೆಸ್ ನೇತೃತ್ವದ ಯುಪಿಎನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
ಹೊಸ ಪಕ್ಷ ರಚನೆಗೆ ಸಂಬಂಧಿಸಿದಂತೆ ಶರದ್ ಯಾದವ್ ಅವರು ಜೆಡಿಯು ರಾಜ್ಯ ಘಟಕದ ನಾಯಕರೊಂದಿಗೆ ಚರ್ಚಿಸುತ್ತಿದ್ದಾರೆ ಮತ್ತು ಇತರೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶರದ್ ಯಾದವ್ ಅವರ ಆಪ್ತ ವಿಜಯ್ ವರ್ಮಾ ಅವರು ಹೇಳಿರುವುದಾಗಿ ವರದಿ ತಿಳಿಸಿದೆ. ಅಲ್ಲದೆ ಈ ಕುರಿತು ಒಂದು ವಾರದಲ್ಲೇ ಅಧಿಕೃತ ಘೋಷಣೆ ಹೊರ ಬೀಳಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


