ಖಾಸಗಿ ಮಾಹಿತಿಗಳನ್ನು ರಕ್ಷಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳು ಅಗತ್ಯ: ಸುಪ್ರೀಂ ಕೋರ್ಟ್
ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು...

Published On :
ನವದೆಹಲಿ: ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು ರಕ್ಷಿಸಿಕೊಳ್ಳಲು ಸಮಗ್ರ ಮಾರ್ಗದರ್ಶಿ ಸೂತ್ರಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ಗೌಪ್ಯವಾಗಿ ಕಾಪಾಡುವುದು ಮೂಲಭೂತ ಹಕ್ಕೇ ಎಂಬಂತಹ ವಿವಾದಾಸ್ಪದ ವಿಷಯಗಳ ಕುರಿತು ವಿಚಾರಣೆ ನಡೆಸಿದ ಒಂಭತ್ತು ಮಂದಿ ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ, ಗುಜರಾತ್ ಸರ್ಕಾರದ ವಕೀಲರ ಮನವಿಯನ್ನು ತಿರಸ್ಕರಿಸಿತು. ಜನರ ಖಾಸಗಿ ಮಾಹಿತಿಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಅವುಗಳ ರಕ್ಷಣೆಗೆ ಸಮಗ್ರ ಮಾರ್ಗದರ್ಶಿ ಸೂತ್ರಗಳ ಅವಶ್ಯಕತೆಯಿದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಅವರನ್ನೊಳಗೊಂಡ ನ್ಯಾಯಪೀಠ, ಭಾರತ 1948ರ ಅಂತರರಾಷ್ಟ್ರೀಯ ಅಧಿವೇಶನಕ್ಕೆ ಸಹಿ ಹಾಕಿದ್ದು, ಅದರಲ್ಲಿ ಗೌಪ್ಯತೆಯನ್ನು ಕಾಪಾಡುವುದು ಮಾನವ ಹಕ್ಕು ಎಂದು ಹೇಳಲಾಗಿದೆ ಎಂದು ಉಲ್ಲೇಖಿಸಿದೆ.
1948ರಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾಡಿಕೊಂಡ ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ರಕ್ಷಿಸಿಕೊಳ್ಳುವುದು ಮೂಲಭೂತ ಹಕ್ಕು ಎಂದು ಸಹಿ ಮಾಡಿಕೊಂಡಿರುವಾಗ ಮತ್ತು ಇದೀಗ ನಿರ್ದಿಷ್ಟ ಉದ್ದೇಶಗಳಿಗೆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಾಗ ಅದನ್ನು ಹೇಗೆ ನಿಭಾಯಿಸುತ್ತೀರಿ ಎಂದು ಮಹಾರಾಷ್ಟ್ರ ಸರ್ಕಾರ ಮುಂದಿಟ್ಟ ಪ್ರಶ್ನೆಯನ್ನು ಕೋರ್ಟ್ ಉಲ್ಲೇಖಿಸಿತು.
ಇಂತಹ ಸಂದರ್ಭದಲ್ಲಿ ವ್ಯಕ್ತಿಗಳ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳಬಹುದಾಗಿದ್ದು ಅದಕ್ಕೆ ಸಮಗ್ರ ಮಾರ್ಗದರ್ಶಿ ಸೂತ್ರದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿ ಹೇಳಿತು.
ಒಬ್ಬ ವ್ಯಕ್ತಿಯ ಹೆಸರು, ಪೋಷಕರ ಹೆಸರು, ದೂರವಾಣಿ ಸಂಖ್ಯೆ ಸಾರ್ವಜನಿಕವಾಗಿ ಸಿಗುತ್ತದೆಯೆಂದರೆ ಅದನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳುತ್ತಾರೆಯೇ ಇಲ್ಲವೇ ಎಂದು ಪರೀಕ್ಷಿಸುವುದು ಕಷ್ಟವಾಗುತ್ತದೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ನಿಭಾಯಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳ ಅಗತ್ಯವಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್private informationಖಾಸಗಿ ಮಾಹಿತಿOverarching guidelinesIndividualಮಾರ್ಗದರ್ಶಿ ಸೂತ್ರಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


