ದೇಶ

ರಾಜ್ಯಸಭಾ ಚುನಾವಣೆ: ನೋಟಾ ಆಯ್ಕೆ ಪ್ರಶ್ನಿಸಿರುವ ಕೈ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಕೇಂದ್ರ ಚುನಾವಣಾ ಆಯೋಗ ಇದೆ ಮೊದಲ ಬಾರಿ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ (None Of The Above) ಬಳಸುವ ಅವಕಾಶವನ್ನು ನೀಡಿದೆ.

ರಾಜ್ಯಸಭಾ ಚುನಾವಣೆ: ನೋಟಾ ಆಯ್ಕೆ ಪ್ರಶ್ನಿಸಿರುವ ಕೈ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು
ಸುಪ್ರೀಂ ಕೋರ್ಟ್
Published On :
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇದೆ ಮೊದಲ ಬಾರಿ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ (None Of The Above) ಬಳಸುವ ಅವಕಾಶವನ್ನು ನೀಡಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ನೋಟಾ (None Of The Above) ಆಯ್ಕೆಯನ್ನು ಬಳಸಲು ಅವಕಾಶ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಗುಜರಾತ್ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಈ ಸಂಬಂಧ ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಗೆ ಸೂಚಿಸಿದೆ. 
ಆ.03 ರಂದು ಕಾಂಗ್ರೆಸ್ ನ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಗುಜರಾತ್ ನ ರಾಜ್ಯಸಭೆ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವಿಗೆ ತಡೆಯಲು ಬಿಜೆಪಿ ಯತ್ನಿಸುತ್ತಿದೆ. ಈ ವಿಚಾರವಾಗಿ ರಾಜ್ಯಸಭೆಯಲ್ಲೂ ಚರ್ಚೆಯಾಗಿದ್ದು, ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಆರೋಪ ಮಾಡಿದೆ. 
ಆಗಸ್ಟ್ 8ರಂದು ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಶಾಸಕರು ನೋಟಾ ಆಯ್ಕೆಯನ್ನು ಬಳಸಲು ಆಯ್ಕೆ ನೀಡಲಾಗಿದೆ.  ಈ ವಿಚಾರವೂ ಸಹ ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದ್ದು,  ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸದನದ ಗಮನಕ್ಕೆ ತಾರದೆ ಚುನಾವಣಾ ಆಯೋಗ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಜಾರಿಗೆ ತಂದಿದೆ. ಈ ಮೂಲಕ ಸಂವಿಧಾನ ವಿರೋಧಿ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.