ಪ್ರಣಬ್ ದಾ ಅಧಿಕಾರಾವಧಿಯ ಕೊನೆಯ ದಿನ ಕೃತಜ್ಞತೆ ಸಲ್ಲಿಸಿ ಪತ್ರ ಬರೆದ ಪ್ರಧಾನಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಅಧಿಕಾರಾವಧಿಯ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರ ಮನಮುಟ್ಟಿತು

Published On :
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಅಧಿಕಾರಾವಧಿಯ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರ ಹೃದಯವನ್ನು ಮುಟ್ಟಿತು ಎಂದಿದ್ದಾರೆ.
"ತಂದೆಯ ಸ್ಥಾನದಲ್ಲಿ ನಿಂತು, ಮಾರ್ಗದರ್ಶಕರಾಗಿ ಸಹಕಾರ ನೀಡಿದ್ದೀರಿ ಎಂದು ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಯಾಗಿದ್ದಾಗ ನಿಮ್ಮ ಅಧಿಕಾರಾವಧಿಯಲ್ಲಿ ರಾಷ್ಟ್ರಹಿತವನ್ನು ಉಳಿದ ಎಲ್ಲಾ ವಿಷಯಗಳಿಗಿಂತ ಮಿಗಿಲಾಗಿ ಪರಿಗಣಿಸಿದ್ದಿರಿ ಎಂದು ಎರಡು ಪುಟಗಳ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೆದಿದ್ದಾರೆ.
ಪ್ರಣಬ್ ಮುಖರ್ಜಿ ಅವರ ಬೌದ್ಧಿಕ ಪರಾಕ್ರಮ ಕೇಂದ್ರ ಸರ್ಕಾರಕ್ಕೆ ನೆರವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದಲ್ಲಿ ಬರೆದಿದ್ದಾರೆ. " ಮೂರು ವರ್ಷದ ಹಿಂದೆ ನಾನು ದೆಹಲಿಗೆ ಹೊರಗಿನ ವ್ಯಕ್ತಿಯಾಗಿದ್ದೆ. ನನ್ನೆದುರು ಹಲವಾರು ಸವಾಲಿನ ವಿಷಯಗಳಿದ್ದವು. ಅಂತಹ ಸಂದರ್ಭದಲ್ಲಿ ನೀವು "ತಂದೆಯ ಸ್ಥಾನದಲ್ಲಿ ನಿಂತು, ಮಾರ್ಗದರ್ಶಕರಾಗಿ ಸಹಕಾರ ನೀಡಿ ನನ್ನಲ್ಲಿ ವಿಶ್ವಾಸವನ್ನು ತುಂಬಿದ್ದೀರಿ ಎಂದು ಮೋದಿ ಪ್ರಣಬ್ ಮುಖರ್ಜಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


