ಈಗ ರಾಜ್ಯಸಭೆಯಲ್ಲೂ ಬಿಜೆಪಿ ಅತಿ ದೊಡ್ಡ ರಾಜಕೀಯ ಪಕ್ಷ
ಭಾರತೀಯ ಜನತಾ ಪಕ್ಷ(ಬಿಜೆಪಿ) ಶುಕ್ರವಾರ ರಾಜ್ಯಸಭೆಯಲ್ಲೂ ಕಾಂಗ್ರೆಸ್ ಅನ್ನು ಹಿಂದಿಕ್ಕಿ ಏಕೈಕ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ...

Published On :
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಶುಕ್ರವಾರ ರಾಜ್ಯಸಭೆಯಲ್ಲೂ ಕಾಂಗ್ರೆಸ್ ಅನ್ನು ಹಿಂದಿಕ್ಕಿ ಏಕೈಕ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ.
ಮಧ್ಯ ಪ್ರದೇಶದಿಂದ ರಾಜ್ಯಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದ ಸಂಪತಿಯಾ ಯುಕೇ ಅವರು ಇಂದು ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 57 ಸದಸ್ಯರನ್ನು ಹೊಂದಿದೆ.
ಕೇಂದ್ರ ಸಚಿವ ಅನಿಲ್ ಮಾಧವ್ ದವೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇತ್ತೀಚಿಗೆ ಚುನಾವಣೆ ಉಪ ಚುನಾವಣೆ ನಡೆದಿತ್ತು.
ಮೇ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಸಭೆಯಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


