2 ಪ್ಯಾನ್ ಕಾರ್ಡ್ ಹೊಂದಿರುವ ಅಜಂ ಖಾನ್ ಪುತ್ರನ ವಿರುದ್ಧ ತನಿಖೆಗೆ ಚುನಾವಣಾ ಆಯೋಗ ಆದೇಶ
ಎರಡು ಪ್ಯಾನ್ ಕಾರ್ಡ್ ಹೊಂದಿರುವ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪುತ್ರ ಅಬ್ದುಲ್ಲಾ ಅಜಂ ಖಾನ್ ವಿರುದ್ಧ ತನಿಖೆ...

Published On :
ರಾಮ್ಪುರ್(ಉತ್ತರ ಪ್ರದೇಶ): ಎರಡು ಪ್ಯಾನ್ ಕಾರ್ಡ್ ಹೊಂದಿರುವ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪುತ್ರ ಅಬ್ದುಲ್ಲಾ ಅಜಂ ಖಾನ್ ವಿರುದ್ಧ ತನಿಖೆ ನಡೆಸುವಂತೆ ರಾಮ್ಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಚುನಾವಣಾ ಆಯೋಗ ಆದೇಶಿಸಿದೆ.
ಪ್ರಮಾಣಪತ್ರದಲ್ಲಿ ಅಬ್ದುಲ್ಲಾ ಅಜಂ ಖಾನ್ ಎರಡು ಪ್ಯಾನ್ ಕಾರ್ಡ್ ಹೊಂದಿರುವುದಾಗಿ ನಮೂದಿಸಿದ್ದು ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಸಂಬಂಧ ಶೀಘ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ ಎಂದು ರಾಮ್ಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಅಬ್ದುಲ್ಲಾ ಅಜಂ ಖಾನ್ ಚುನಾವಣಾ ಆಯೋಗಕ್ಕೆ ನೀಡಿದ ಪ್ರಮಾಣ ಪತ್ರದಲ್ಲಿ ಎರಡು ಪ್ಯಾನ್ ಕಾರ್ಡ್ ಹೊಂದಿರುವುದಾಗಿ ನಮೂದಿಸಿದ್ದಾರೆ ಎಂದು ಮಾಜಿ ಸಚಿವ ಶಿವ್ ಬಹದೂರ್ ಸಕ್ಸೆನಾ ಪುತ್ರ ಆಕಾಶ್ ಸಕ್ಸೆನಾ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದು ಈ ಹಿನ್ನೆಲೆಯಲ್ಲಿ ತನಿಖೆಗೆ ಆಯೋಗ ಸೂಚಿಸಿದೆ.
2016-17ರ ಆದಾಯ ತೆರಿಗೆ ರಿಟರ್ನ್ಸ್ ಗಾಗಿ ಅಬ್ದುಲ್ಲಾ ಅಜಂ ಖಾನ್ ಒಂದು ಪ್ಯಾನ್ ಕಾರ್ಡ್ ನಂಬರ್ ಬಳಸಿದ್ದು, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಇನ್ನೊಂದು ಪ್ಯಾನ್ ಕಾರ್ಡ್ ನಂಬರ್ ಕೊಟ್ಟಿದ್ದಾರೆ ಎಂದು ಆಕಾಶ್ ಸಕ್ಸೆನಾ ದೂರು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Azam Khanಸಮಾಜವಾದಿ ಪಕ್ಷSamajwadi PartyElection Commissionಚುನಾವಣಾ ಆಯೋಗಅಜಂ ಖಾನ್RampurPAN cardಪ್ಯಾನ್ ಕಾರ್ಡ್ರಾಮ್ಪುರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


